Advertisement

ಶೇ. 2 ಕ್ರೀಡಾ ಮೀಸಲಾತಿ ಎಲ್ಲ ಇಲಾಖೆಗೆ ವಿಸ್ತರಣೆ

12:40 AM Aug 14, 2021 | Team Udayavani |

ಬೆಂಗಳೂರು: ಕ್ರೀಡಾ ಚಟುವಟಿಕೆಗಳಿಗೆ ಪ್ರೋತ್ಸಾಹ ಹೆಚ್ಚಿಸುವ ಸಲುವಾಗಿ ರಾಜ್ಯದ ಕ್ರೀಡಾಪಟು ಗಳಿಗೆ ಪೊಲೀಸ್‌ ಇಲಾಖೆ ಘೋಷಿಸಿರುವ ಶೇ. 2 ಮೀಸಲಾತಿಯನ್ನು ಎಲ್ಲ ಇಲಾಖೆಗಳಿಗೂ ವಿಸ್ತರಿಸುವ ಮತ್ತು ಸರಕಾರಿ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ಸುಮಾರು 39,000 ದೈಹಿಕ ಶಿಕ್ಷಕರ ನೇಮಕ ಸಂಬಂಧ ಸರಕಾರಕ್ಕೆ ಕ್ರೀಡಾ ಇಲಾಖೆ ಪ್ರಸ್ತಾವನೆ ಸಲ್ಲಿಸಿದೆ.

Advertisement

ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಕೆ.ಸಿ. ನಾರಾಯಣ ಗೌಡ ಈ ಮಾಹಿತಿ ನೀಡಿ ದ್ದಾರೆ. ಕ್ರೀಡಾ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡಿರುವ ರಾಜ್ಯದ ಕ್ರೀಡಾಪಟುಗಳು ಜೀವನ ರೂಪಿಸಿಕೊಳ್ಳಲು ಸರಕಾರಿ ಉದ್ಯೋಗ ಸಹಕಾರಿಯಾಗಲಿದೆ. ಹೀಗಾಗಿ ಕ್ರೀಡಾ ಮೀಸಲಾತಿಯನ್ನು ಎಲ್ಲ ಇಲಾಖೆಗಳಿಗೂ ವಿಸ್ತರಿಸಲು ಸರಕಾರ ಚಿಂತನೆ ನಡೆಸುತ್ತಿದೆ ಎಂದರು.

ಸರಕಾರಿ ಶಾಲೆಗಳಲ್ಲಿ ಸುಮಾರು 39,800 ದೈಹಿಕ ಶಿಕ್ಷಣ ಶಿಕ್ಷಕರ ಕೊರತೆಯಿದೆ. ಈ ಎಲ್ಲ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುವಂತೆ ಈಗಾಗಲೇ ಶಿಕ್ಷಣ ಇಲಾಖೆಗೆ ಪತ್ರ ಬರೆಯಲಾಗಿದೆ ಎಂದರು.

ಕ್ರೀಡಾ ವಿಜ್ಞಾನ ಕೇಂದ್ರವನ್ನು ಮಂಡ್ಯ ಜಿಲ್ಲೆಯಲ್ಲೂ 2 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲಾಗುತ್ತಿದೆ. ಮಂಡ್ಯ ವಿಶ್ವೇಶ್ವರಯ್ಯ ಕ್ರೀಡಾಂಗಣವನ್ನು 10 ಕೋಟಿ ರೂ. ಕೆ.ಆರ್‌. ಪೇಟೆ ತಾಲೂಕು ಕ್ರೀಡಾಂಗಣವನ್ನು 14.5 ಕೋಟಿ ರೂ. ವೆಚ್ಚದಲ್ಲಿ ನವೀಕರಿಸಲಾಗುತ್ತಿದೆ. ಕಂಠೀರವ ಕ್ರೀಡಾಂಗಣದಲ್ಲಿ 4.5 ಕೋಟಿ ರೂ., ಚಿಕ್ಕಮಗಳೂರು ಮತ್ತು ಹಾಸನದಲ್ಲಿ ತಲಾ 7.50 ಕೋಟಿ ರೂ. ವೆಚ್ಚದಲ್ಲಿ ಸಿಂಥೆಟಿಕ್‌ ಟ್ರ್ಯಾಕ್‌, ಕೋರಮಂಗಲ ಒಳಾಂಗಣ ಕ್ರೀಡಾಂಗಣವನ್ನು 5 ಕೋಟಿ ರೂ. ವೆಚ್ಚದಲ್ಲಿ ನವೀಕರಿಸಲಾಗುತ್ತಿದೆ ಎಂದರು.

ಮಂಗಳೂರು ಸಹಿತ 10 ಕಡೆ ಕ್ರೀಡಾ ವಸತಿ ನಿಲಯ :

Advertisement

ಈ ಸಾಲಿನಲ್ಲಿ ಬಾಲಕಿಯರ ಪ್ರತ್ಯೇಕ ಕ್ರೀಡಾ ವಸತಿ ನಿಲಯಗಳನ್ನು ಮಂಗಳೂರು ಸಹಿತ 10 ಕಡೆ ನಿರ್ಮಿಸ ಲಾಗುವುದು. ರಾಜ್ಯದಲ್ಲಿ 34 ಕ್ರೀಡಾ ವಸತಿ ನಿಲಯ ಗಳಿದ್ದು, 2,300ಕ್ಕೂ ಹೆಚ್ಚು ವಿದ್ಯಾರ್ಥಿ ಗಳಿದ್ದಾರೆ. ಕ್ರೀಡಾ ವಸತಿ ನಿಲಯಗಳನ್ನು ಪ್ರಸಕ್ತ ಸಾಲಿ ನಲ್ಲಿ 5.75 ಕೋಟಿ ರೂ. ವೆಚ್ಚದಲ್ಲಿ ಆಧುನೀಕರಣ ಗೊಳಿಸಲಾಗುತ್ತದೆ. ಜಕ್ಕೂರು ವೈಮಾನಿಕ ತರಬೇತಿ ಶಾಲೆಗೂ ಕಾಯಕಲ್ಪ ನೀಡುತ್ತಿದ್ದೇವೆ ಎಂದರು.

2024ರಲ್ಲಿ ಪ್ಯಾರಿಸ್‌ನಲ್ಲಿ ನಡೆಯಲಿರುವ ಒಲಿಂಪಿಕ್ಸ್‌ಗೆ ರಾಜ್ಯದಿಂದ 100 ಕ್ರೀಡಾಪಟುಗಳನ್ನು ಕಳುಹಿಸುವ ಯೋಜನೆ ರೂಪಿಸಲಾಗಿದೆ. ಈಗಾಗಲೇ 35 ಕ್ರೀಡಾಪಟುಗಳನ್ನು ಗುರುತಿಸಲಾಗಿದೆ. ಕ್ರೀಡಾ ಪಟು ಗಳಿಗೆ ತಲಾ 5 ಲಕ್ಷ ರೂ. ಪ್ರೋತ್ಸಾಹ ಧನ ನೀಡಲಾಗುತ್ತಿದೆ ಎಂದು ಸಚಿವ ಕೆ.ಸಿ. ನಾರಾಯಣ ಗೌಡ ಅವರು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next