Advertisement
ಎಲ್ಲೂರು ಕೈಗಾರಿಕಾ ತರಬೇತಿ ಸಂಸ್ಥೆಯ ಉದ್ದೇಶಕ್ಕಾಗಿ 3.04 ಎಕ್ರೆ ಜಮೀನನ್ನು ಮಂಜೂರು ಮಾಡಲಾಗಿದ್ದು, ಅದನ್ನು ಎಸಿಸಿ ಸಂಸ್ಥೆಯ ಉಪಯೋಗಕ್ಕಾಗಿ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಗೆ ಮಂಜೂರು ಮಾಡಲಾಗಿದೆ. ಅದರಂತೆ ಜಿಲ್ಲಾಧಿಕಾರಿ ಕಚೇರಿಯಿಂದ 09.12.2015ರಂದು ಆದೇಶ ಹೊರಡಿಸಿ ಪಹಣಿ ಕಾಲಂ 9ರಲ್ಲಿ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ಎಂದು ದಾಖಲು ಮಾಡಲಾಗಿದೆ ಎಂದು ಕಂದಾಯ ಸಚಿವರು ತಿಳಿಸಿದರು.
ರಾಜ್ಯ ಸರಕಾರಿ ನಿಗಮ ಮಂಡಳಿ, ಅನುದಾನಿತ, ಸ್ವಯತ್ತ ಸಂಸ್ಥೆಗಳ ನೌಕರರ ಹೊಸ ಪಿಂಚಣಿ ಯೋಜನೆ(ಎನ್.ಪಿ.ಎಸ್.)ಯನ್ನು ರದ್ದುಪಡಿಸಿ ಹಳೆ ಪಿಂಚಣಿ ಯೋಜನೆಯನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಹಳೆ ಪಿಂಚಣಿ ಯೋಜನೆಯನ್ನು ಮರು ಜಾರಿಗೊಳಿಸಿರುವ ರಾಜ್ಯಗಳಲ್ಲಿ ಈ ಯೋಜನೆಯನ್ನು ಅನುಷ್ಠಾನಗೊಳಿಸಿರುವ ಕುರಿತು ಕೈಗೊಂಡಿರುವ ಕ್ರಮಗಳ ಬಗ್ಗೆ ಅಧ್ಯಯನ ನಡೆಸಿ ವರದಿ ಸಲ್ಲಿಸಲು ಸರಕಾರದ ಅಪರ ಮುಖ್ಯ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೀಡಿರುವ ಉತ್ತರದಲ್ಲಿ ತಿಳಿಸಿದ್ದಾರೆ.