ಬೆಂಗಳೂರು: ರಾಜ್ಯದಲ್ಲಿ ಕೊರೊನಾದಿಂದ 3.27 ಲಕ್ಷ ಜನರು ಮೃತಪಟ್ಟಿದ್ದು, ಎಲ್ಲರಿಗೂ ಪರಿಹಾರ ನೀಡಬೇಕು. ತಕ್ಷಣವೇ ರಾಜ್ಯ ವಿಧಾನಮಂಡಲ ಅಧಿವೇಶನಕರೆಯಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಒತ್ತಾಯಿಸಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸರ್ಕಾರಿ ವೆಬ್‌ಸೈಟ್‌ನಲ್ಲೇ 3.27 ಲಕ್ಷ ಜನಕೊರೊನಾದಿಂದ ಮೃತಪಟ್ಟಿದ್ದಾರೆ ಎಂದು ತಿಳಿಸಲಾಗಿದೆ.ಆದರೆ, ಹೆಲ್ತ್ ಬುಲೆಟಿನ್‌ನಲ್ಲಿ 31 ಸಾವಿರ ಎಂದು ಹೇಳಲಾಗಿದೆ.
ಸರ್ಕಾರ ಕೊರೊನಾ ಸಾವು ಸಂಖ್ಯೆಮುಚ್ಚಿಡುವಕೆಲಸ ಮಾಡುತ್ತಿದೆ ಎಂದು ದೂರಿದರು.ಸರ್ಕಾರವು ಪರಿಹಾರ ನೀಡುವ ವಿಚಾರದಲ್ಲೂತಾರತಮ್ಯ ಮಾಡಲಾಗುತ್ತಿದ್ದು, ಸುಪ್ರೀಂಕೋರ್ಟ್‌ಮಧ್ಯಪ್ರವೇಶ ಮಾಡುವ ಸ್ಥಿತಿ ನಿರ್ಮಾಣವಾಗಿದೆ.ಕೊರೊನಾ ನಿರ್ವಹಣೆ ಸೇರಿ ರಾಜ್ಯದ ಸಮಸ್ಯೆಗಳ ಬಗ್ಗೆಚರ್ಚಿಸಲು ತಕ್ಷಣವೇ ಅಧಿವೇಶನ ಕರೆಯಬೇಕುಎಂದು ಆಗ್ರಹಿಸಿದರು.
ಇದೇ ಸಂದರ್ಭದಲ್ಲಿ ಚಾಮರಾಜನಗರದಲ್ಲಿ ಆಕ್ಸಿಜನ್ ಸಿಗದೆ ಮೃತಪಟ್ಟ ಕುಟುಂಬಗಳ ಕರುಣಾಜನಕವಿಚಾರಗಳನ್ನೂವಿವರಿಸಿದಡಿ.ಕೆ.ಶಿವಕುಮಾರ್,ಮುಖ್ಯಮಂತ್ರಿಗಳು ಹಾಗೂ ಅವರ ಸಂಪುಟ ಸಹೋದ್ಯೋಗಿಗಳು ಇಡೀ ರಾಜ್ಯ ಸುತ್ತಿ ಕೊರೊನಾದಿಂದ ತೊಂದರೆಗೊಳಗಾಗಿರುವ ಜನರ ಸಂಕಷ್ಟ ಆಲಿಸಬೇಕು. ಇಡೀ ರಾಜ್ಯ ಆಗದಿದ್ದರೂ ಕನಿಷ್ಟ ಪಕ್ಷ ಚಾಮರಾಜನಗರ ಆಕ್ಸಿಜನ್ ದುರಂತದಲ್ಲಿ ಮೃತಪಟ್ಟ 36 ಮಂದಿಯ ಕುಟುಂಬಗಳನ್ನಾದರೂ ಭೇಟಿ ಮಾಡಿ, ಅವರ ಕಷ್ಟ ಕೇಳಲಿ ಎಂದುಒತ್ತಾಯಿಸಿದರು.
ಒಬ್ಬ ಯುವಕನ ದೇಹವನ್ನು ಬೇರೆಯವರಿಗೆ ನಿಮ್ಮಕಡೆಯವರು ತೆಗೆದುಕೊಂಡು ಹೋಗಿ ಎಂದು ಬಲವಂತ ಮಾಡಿದ್ದಾರೆ. ಆಮೇಲೆ ಅವರು ನಮ್ಮವರಲ್ಲಎಂದು ಮತ್ತೆ ವಾಪಸ್ ತಂದು ಕೊಟ್ಟಿದ್ದಾರೆ. ನಂತರ ಆತನನ್ನು ಅವನ ಸ್ನೇಹಿತರು ಗುರುತಿಸಿ, ಆತನ ತಾಯಿಗೆಶವ ಹಸ್ತಾಂತರ ಮಾಡಿದ್ದಾರೆ ಇದು ಚಾಮರಾಜನಗರದಲ್ಲಿ ನಡೆದಿರುವುದಕ್ಕೆ ಸಾಕ್ಷಿ ಎಂದರು.
ಸತ್ತವರ ಜೇಬಿನಲ್ಲಿದ್ದ ವಸ್ತುಗಳನ್ನು ತೆಗೆದುಕೊಂಡಿದ್ದಾರೆ,ಎಷ್ಟೋಹೆಣ್ಣುಮಕ್ಕಳ ತಾಳಿಎಳೆದುಕೊಂಡಿದ್ದಾರೆ.ಕಿವಿ ಓಲೆ, ಮೂಗು ಬೊಟ್ಟುಗಳನ್ನು ಚರ್ಮಸಮೇತಕಿತ್ತು ಹಾಕಿದ್ದಾರೆ ಎಂದು ಜನ ನಮ್ಮ ಬಳಿ ನೋವು ಹೇಳಿಕೊಂಡರು. ಆ 36 ಕುಟುಂಬದ ನೋವು ಕೇಳಿದರೆಕರಳು ಕಿತ್ತು ಬರುತ್ತದೆ. ಈ ಸರ್ಕಾರಕ್ಕೆ ಕಣ್ಣು, ಕಿವಿ,ಹೃದಯ ಇದೆಯೋ, ಇಲ್ಲವೋ ಅನಿಸುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.