Advertisement
ನಾರಾವಿಯ ಅಟ್ಯಡ್ಕ ನಿವಾಸಿ ಲಿಯೋ ಪಾಯಸ್ ವಂಚನೆಗೊಳಗಾದವರು.
ಆರೋಪಿಗಳಿಬ್ಬರು ಜ. 18ರಂದು ನಾರಾವಿಯ ಅಟ್ಯಡ್ಕ ನಿವಾಸಿ ಲಿಯೋ ಪಾಯಸ್‌ರವರ ಮನೆಗೆ ಬಂದು ಅವರ ಪುತ್ರ ಸುರೇಶ್ ಪಾಯಸ್‌ಗೆ ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಮಾತುಕತೆ ನಡೆಸಿದ್ದಾರೆ. ಈ ಬಗ್ಗೆ 1.25 ಲಕ್ಷ ರೂ. ನಗದು ಪಡೆದು ಬಳಿಕ ವಿವಿಧ ಹಂತಗಳಲ್ಲಿ 1.37 ಲಕ್ಷ ರೂ., 40 ಸಾವಿರ, 28 ಸಾವಿರ ರೂ. ನಗದನ್ನು ತಮ್ಮ ಖಾತೆಗೆ ವರ್ಗಾವಣೆ ಮಾಡಿಕೊಂಡಿದ್ದಾರೆ. ಆರೋಪಿಗಳು ಬಳಿಕ ಸುರೇಶ್ ಪಾಯಸ್‌ಗೆ ಮೊಬೈಲ್ ಮೂಲಕ ಬಲ್ಗೇರಿಯಾಕ್ಕೆ ವಿಮಾನ ಟಿಕೆಟ್ ಬುಕ್ ಮಾಡಿದ ನಕಲಿಪ್ರತಿಯನ್ನು ವಾಟ್ಸ್ ಆ್ಯಪ್‌ನಲ್ಲಿ ಕಳುಹಿಸಿರುವ ಆರೋಪಿಗಳು ಮುಂಬಯಿಗೆ ಬರುವಂತೆ ತಿಳಿಸಿದ್ದಾರೆ. ಅದರಂತೆ ಸುರೇಶ್ ಪಾಯಸ್ ಮುಂಬಯಿಗೆ ತೆರಳಿದ್ದು, ಅಲ್ಲಿ ಆರೋಪಿಗಳು ವೀಸಾ ಹಾಗೂ ವಿದೇಶಿ ಕರೆನ್ಸಿ ತರುವುದಾಗಿ ಹೇಳಿ ಹೋದವರು ಮರಳದೇ ವಂಚಿಸಿದ್ದಾರೆ.
Related Articles
Advertisement
ಪ್ರಕರಣದ ಓರ್ವ ಆರೋಪಿ ಈಗಾಗಲೇ ಬಂಧನ ದಲ್ಲಿದ್ದು, ಮತ್ತೋರ್ವ ಆರೋಪಿಯ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.