Advertisement

ಕೃಷ್ಣಾ ನದಿ ಮಟ್ಟದಲ್ಲಿ 3.5 ಅಡಿ ಹೆಚ್ಚಳ

03:41 PM Jul 11, 2020 | Suhan S |

ಚಿಕ್ಕೋಡಿ: ಮಹಾರಾಷ್ಟ್ರದ ಘಟ್ಟ ಪ್ರದೇಶ ಹಾಗೂ ಚಿಕ್ಕೋಡಿ ಉಪವಿಭಾಗ ವ್ಯಾಪ್ತಿಯಲ್ಲಿ ಕಳೆದ 24 ಗಂಟೆಯಲ್ಲಿ ಭಾರಿ ಮಳೆ ಸುರಿದಿದೆ. ಹೀಗಾಗಿ ಕೃಷ್ಣಾ, ದೂಧಗಂಗಾ ಮತ್ತು ವೇದಗಂಗಾ ನದಿಗಳ ನೀರಿನ ಮಟ್ಟದಲ್ಲಿ ಶುಕ್ರವಾರ 3.5 ಅಡಿಯಷ್ಟು ಏರಿಕೆಯಾಗಿದ್ದು, ಮೂರು ನದಿಗಳಿಗೆ 71 ಸಾವಿರ ಕ್ಯೂಸೆಕ್‌ ನೀರು ಹರಿದು ಬರಲಾರಂಭಿಸಿದೆ.

Advertisement

ಕೃಷ್ಣಾ ನದಿ ಉಗಮಸ್ಥಾನ ಮಹಾಬಳೇಶ್ವರ ವ್ಯಾಪ್ತಿಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ. ಅದರಂತೆ ಚಿಕ್ಕೋಡಿ ಉಪವಿಭಾಗ ವ್ಯಾಪ್ತಿಯ ಚಿಕ್ಕೋಡಿ, ಅಂಕಲಿ, ನಾಗರಮುನ್ನೋಳ್ಳಿ, ಸದಲಗಾ ಹಾಗೂ ನಿಪ್ಪಾಣಿ ಭಾಗದಲ್ಲಿ ಗುರುವಾರ ಮಧ್ಯಾಹ್ನ ಮತ್ತು ರಾತ್ರಿ ಭಾರಿ ಮಳೆ ಸುರಿದಿದೆ. ವೇದಗಂಗಾ ನದಿಗೆ ಅಡ್ಡಲಾಗಿ ಕಟ್ಟಿರುವ ಜತ್ರಾಟ-ಭೀವಸಿ ಸೇತುವೆ ಮುಳುಗುವ ಹಂತದಲ್ಲಿದೆ. ಈಗಾಗಲೇ ಚಿಕ್ಕೋಡಿ ಉಪವಿಭಾಗದ ಆರು ಸೇತುವೆಗಳು ಗುರುವಾರ ಮುಳುಗಡೆಗೊಂಡಿವೆ.

ಮಹಾರಾಷ್ಟ್ರದ ರಾಜಾಪುರ ಬ್ಯಾರೇಜ್‌ದಿಂದ ಕೃಷ್ಣಾ ನದಿಗೆ 53,500 ಕ್ಯೂಸೆಕ್‌ ನೀರು ರಾಜ್ಯಕ್ಕೆ ಹರಿದು ಬರುತ್ತಿದೆ. ದೂಧಗಂಗಾ ಮತ್ತು ವೇದಗಂಗಾ ನದಿ ಮೂಲಕ 18 ಸಾವಿರ ಕ್ಯೂಸೆಕ್‌ ನೀರು ಹರಿದು ಚಿಕ್ಕೋಡಿ ತಾಲೂಕಿನ ಕಲ್ಲೋಳ ಹತ್ತಿರ ಕೂಡುತ್ತಿದೆ. ಹೀಗಾಗಿ ಕಲ್ಲೋಳ ಗ್ರಾಮದ ಹತ್ತಿರ ಕೃಷ್ಣಾ ನದಿಗೆ ಒಟ್ಟು 71,600 ಕ್ಯೂಸೆಕ್‌ ನೀರು ಹರಿದು ಬರಲಾರಂಭಿಸಿದೆ. ಜಮಖಂಡಿ ತಾಲೂಕಿನ ಹಿಪ್ಪರಗಿ ಬ್ಯಾರೇಜ ಮೂಲಕ 64ಸಾವಿರ ಕ್ಯುಸೆಕ್‌ ನೀರನ್ನು ಆಲಮಟ್ಟಿಗೆ ಹರಿದು ಬಿಡಲಾಗುತ್ತಿದೆ ಎಂದು ಎಸಿ ಮಾಹಿತಿ ನೀಡಿದ್ದಾರೆ.

ಮಳೆ ವಿವರ: ಕೋಯ್ನಾ-41 ಮಿಮೀ, ನವಜಾ-81 ಮಿಮೀ, ಮಹಾಬಲೇಶ್ವರ ವಾರಣಾ-15 ಮಿಮೀ, ಸಾಂಗ್ಲಿ-13 ಮಿಮೀ, ಕೊಲ್ಲಾಪೂರ-8 ಮಿಮೀ, ಕಾಳಮ್ಮವಾಡಿ-44 ಮಿಮೀ, ರಾಧಾನಗರಿ-82 ಮಿಮೀ, ಪಾಟಗಾಂವ-101 ಮಿಮೀ ಮಳೆಯಾಗಿದೆ.

ಚಿಕ್ಕೋಡಿ ತಾಲೂಕು: ಚಿಕ್ಕೋಡಿ-33.7 ಮಿಮೀ, ಅಂಕಲಿ-54.2 ಮಿಮೀ, ನಾಗರಮುನ್ನೋಳ್ಳಿ-55.4 ಸದಲಗಾ-42 ಮಿಮೀ, ಜೋಡಟ್ಟಿ-40 ಮಿಮೀ.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next