Advertisement

Karnataka: ಸರ್ಕಾರಿ ನೌಕರರ ತುಟ್ಟಿಭತ್ಯೆ ಶೇ.3.75 ಹೆಚ್ಚಳ

08:19 PM Oct 21, 2023 | Team Udayavani |

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಸರ್ಕಾರ ದಸರಾ ಉಡುಗೊರೆ ನೀಡಿದೆ. ನೌಕರರ ತುಟ್ಟಿಭತ್ಯೆಯನ್ನು ಶೇ.3.75ರಷ್ಟು ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

Advertisement

ಈ ಮೂಲಕ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಶೇ.38.75ಕ್ಕೆ ಏರಿಕೆಯಾಗಿದೆ. ಇದೇ ವೇಳೆ, ಯುಜಿಸಿ, ಎಐಸಿಟಿಇ, ಐಸಿಎಆರ್‌ ವೇತನ ಶ್ರೇಣಿಗಳ ಬೋಧಕ ಸಿಬ್ಬಂದಿ ಹಾಗೂ ಎನ್‌ಜೆಪಿಸಿ ವೇತನ ಶ್ರೇಣಿಯ ನ್ಯಾಯಾಂಗ ಅಧಿಕಾರಿಗಳ ತುಟ್ಟಿಭತ್ಯೆಯನ್ನು ಶೇ.4ರಷ್ಟು ಹೆಚ್ಚಿಸಿ (ಶೇ.46ಕ್ಕೆ ಪರಿಷ್ಕರಿಸಿ) ಸರ್ಕಾರ ಆದೇಶ ಹೊರಡಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next