Advertisement

ದೇಶದಲ್ಲಿಂದು 3.79 ಲಕ್ಷ ಹೊಸ ಕೇಸ್ ಪತ್ತೆ, 3,645 ಮಂದಿ ಸಾವು

12:48 PM Apr 29, 2021 | Team Udayavani |

ನವದೆಹಲಿ: ಭಾರತದಲ್ಲಿ ಕೋವಿಡ್ ಸೋಂಕು ದಾಖಲೆ ಪ್ರಮಾಣದಲ್ಲಿ ದಾಖಲಾಗುತ್ತಿದೆ. ಗುರುವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ ಒಟ್ಟು 3,79,257 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಬರೋಬ್ಬರಿ 3645 ಮಂದಿ ಸಾವನ್ನಪ್ಪಿದ್ದಾರೆ.

Advertisement

ಈ ಮೂಲಕ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,83,76,524ಕ್ಕೆ ಏರಿಕೆಯಾಗಿದ್ದು, ಸಾವಿನ ಸಂಖ್ಯೆ 2 ಲಕ್ಷ ಗಡಿ ದಾಟಿ 2,04,832ಕ್ಕೆ ತಲುಪಿದೆ.

ದೇಶದಲ್ಲಿ ದೈನಂದಿನ ಸೋಂಕಿತರ ಸಂಖ್ಯೆ ದಾಖಲೆ ಮಟ್ಟದಲ್ಲಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 30,84,814ಕ್ಕೆ ಏರಿಕೆಯಾಗಿದೆ.  ಈ ನಡುವೆ ಕಳೆದ 24 ಗಂಟೆಗಳಲ್ಲಿ 2,69,507 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 1,50,86,878ಕ್ಕೆ ತಲುಪಿದೆ.

ಭಾರತದಲ್ಲಿ ಒಂದೇ ದಿನ 17,68,190 ಮಂದಿಯನ್ನು ಕೋವಿಡ್ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ 28,44,71,979 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

Advertisement

Udayavani is now on Telegram. Click here to join our channel and stay updated with the latest news.

Next