Advertisement

ಕಾಟಿಪಳ್ಳ : ಬೈಕ್ ಸವಾರನಿಗೆ ಹಲ್ಲೆ ಪ್ರಕರಣ ;ಸುರತ್ಕಲ್ ಪೊಲೀಸರಿಂದ ಮೂವರ ಬಂಧನ

06:10 PM Jan 28, 2021 | Team Udayavani |

ಸುರತ್ಕಲ್ : ಸ್ನೇಹಿತನೊಂದಿಗೆ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಇನ್ನೊಂದು ಬೈಕ್ ನಲ್ಲಿ ಬಂದ ಮೂವರು ಅಪರಿಚಿತರ ತಂಡ ಬೈಕ್ ಅಡ್ಡಗಟ್ಟಿ ಹಲ್ಲೆ ನಡೆಸಿ ಚೂರಿಯಿಂದ ಇರಿದ ಪ್ರಕರಣಕ್ಕೆ ಸಂಬಂಧಿಸಿ ಸುರತ್ಕಲ್ ಪೊಲೀಸರು ಮೂವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Advertisement

ಬಂಧಿತರನ್ನು ಕಾಟಿಪಳ್ಳ ನಿವಾಸಿ ಶ್ರೀನಿವಾಸ (20), ರಾಜು (20) ಹಾಗೂ ಅಭಿಷೇಕ್ (18) ಎನ್ನಲಾಗಿದೆ.

ಘಟನೆ ವಿವರ : ಜನವರಿ 27ರಂದು ರಾತ್ರಿ ಸುಮಾರು 10;45 ರ ಹೊತ್ತಿಗೆ ಕಾಟಿಪಳ್ಳ ನಿವಾಸಿ ತನ್ನ ಸ್ನೇಹಿತನೊಂದಿಗೆ ಬೈಕಿನಲ್ಲಿ ತೆರಳುತ್ತಿದ್ದ ವೇಳೆ ಗಣೇಶ್ ಪುರ ದೇವಸ್ಥಾನದ ಬಳಿ ಇನ್ನೊಂದು ಬೈಕಿನಲ್ಲಿ ಬಂದ ಮೂವರು ದುಷ್ಕರ್ಮಿಗಳು ಬೈಕ್ ಸವಾರರನ್ನು ಅಡ್ಡಗಟ್ಟಿ ಹಲ್ಲೆ ನಡೆಸಿ ಚೂರಿಯಿಂದ ಇರಿದಿದ್ದರು. ಈ ಕುರಿತು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ:ಸರ್ಕಾರದಿಂದ ಐಡಿಬಿಐ ಬ್ಯಾಂಕ್, ಎಲ್ ಐಸಿ ಷೇರು ಮಾರಾಟದ ಘೋಷಣೆ ಸಾಧ್ಯತೆ?

ಪ್ರಕರಣ ಕೈಗೆತ್ತಿಕೊಂಡ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತರಲ್ಲಿ ಶ್ರೀನಿವಾಸ ನ ವಿರುದ್ಧ ಈಗಾಗಲೇ ಮೂರು ಪ್ರಕರಣಗಳು ದಾಖಲಾಗಿವೆ, ಇನ್ನೋರ್ವ ಆರೋಪಿ ರಾಜು ವಿರುದ್ಧ ಎರಡು ಪ್ರಕರಣಗಳು ದಾಖಲಾಗಿದ್ದು, ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ ವಾಹನ, ಆಯುಧಗಳನ್ನು ವಶಪಡಿಕೊಳ್ಳಲಾಗಿದೆ.

Advertisement

ಘಟನೆ ಕುರಿತು ಮಂಗಳೂರು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಅವರ ಮಾರ್ಗದರ್ಶನದಲ್ಲಿ ತನಿಖೆ ನಡೆಯುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next