Advertisement

Budgam; ಬಸ್ ಪ್ರಪಾತಕ್ಕೆ ಬಿದ್ದು 3 ಯೋಧರು ಮೃ*ತ್ಯು, 9 ಮಂದಿಗೆ ಗಂಭೀರ ಗಾಯ

09:13 PM Sep 20, 2024 | Team Udayavani |

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬದ್ಗಾಮ್ ಜಿಲ್ಲೆಯಲ್ಲಿ ಶುಕ್ರವಾರ(ಸೆ20) ಚುನಾವಣ ಕರ್ತವ್ಯಕ್ಕಾಗಿ ಸಿಬಂದಿಯನ್ನು ಸಾಗಿಸುತ್ತಿದ್ದ ಬಸ್ ಭೀಕರ ಅಪಘಾತಕ್ಕೀಡಾಗಿ ಕನಿಷ್ಠ ಮೂವರು ಬಿಎಸ್‌ಎಫ್ ಸೈನಿಕರು ಸಾವನ್ನಪ್ಪಿದ್ದು, ಒಂಬತ್ತು ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Advertisement

ಎರಡನೇ ಹಂತದ ವಿಧಾನಸಭಾ ಚುನಾವಣೆಗೆ ಚುನಾವಣ ಕರ್ತವ್ಯಕ್ಕಾಗಿ ಬಿಎಸ್‌ಎಫ್ ಯೋಧರನ್ನು ಹೊತ್ತೊಯ್ಯುತ್ತಿದ್ದ ಬಾಡಿಗೆ ಬಸ್ಸೊಂದು ಮಧ್ಯ ಕಾಶ್ಮೀರದ ಬುದ್ಗಾಮ್ ಜಿಲ್ಲೆಯ ವಾಟರ್‌ಹಾಲ್‌ನ ಬ್ರೆಲ್ ಬಳಿ ಕಮರಿಗೆ ಬಿದ್ದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಪಘಾತದಲ್ಲಿ ಸುಮಾರು 12 ಯೋಧರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು, ಮೂವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಇತರ ಯೋಧರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next