ಉತ್ತರ ಪ್ರದೇಶ : ಮೆರವಣಿಗೆ ವೇಳೆ ಹೈ-ಟೆನ್ಷನ್ ವಿದ್ಯುತ್ ತಂತಿ ಸ್ಪರ್ಶಿಸಿ ಮೂವರು ಮಕ್ಕಳು ಸೇರಿ ಐದು ಮಂದಿ ಸಾವನ್ನಪ್ಪಿ ಇಬ್ಬರು ಗಾಯಗೊಂಡಿರುವ ಘಟನೆ ಉತ್ತರಪ್ರದೇಶದ ಬಹ್ರೈಚ್ ಜಿಲ್ಲೆಯ ಮಸುಪುರ್ ಗ್ರಾಮದಲ್ಲಿ ಭಾನುವಾರ ಬೆಳಗ್ಗೆ ಸಂಭವಿಸಿದೆ.
ವಾಹನಕ್ಕೆ ಅಳವಡಿಸಿದ ಕಬ್ಬಿಣದ ರಾಡ್ ವಿದ್ಯುತ್ ತಂತಿಗೆ ತಗುಲಿ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ, ಘಟನೆಯಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದರೆ, ಇನ್ನೋರ್ವ ಚಿಕಿತ್ಸೆಗಾಗಿ ಲಕ್ನೋಗೆ ಕರೆದೊಯ್ಯುವ ಮಾರ್ಗಮಧ್ಯದಲ್ಲಿ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ. ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
ಘಟನೆ ನಡೆದ ಕೂಡಲೇ ಪೊಲೀಸರು ಘಟನಾ ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸುವ ಕೆಲಸ ಮಾಡಿದ್ದಾರೆ.
ಬಹ್ರೈಚ್‌ನಲ್ಲಿ ನಡೆದ ಘಟನೆ ಕುರಿತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ ಅಲ್ಲದೆ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡಲು ಆದೇಶಿಸಿದ್ದಾರೆ.
ಇದನ್ನೂ ಓದಿ : ಗರ್ಭಿಣಿ ಅತ್ಯಾಚಾರ ಸಂತ್ರಸ್ತೆಯನ್ನು ಸಜೀವ ದಹಿಸಿದ ದುರುಳರು: ಯುಪಿಯಲ್ಲೊಂದು ಹೀನ ಕೃತ್ಯ