Advertisement

Jalandhar: ಫ್ರಿಡ್ಜ್ ಕಂಪ್ರೆಸರ್ ಸ್ಫೋಟ: 3 ಮಕ್ಕಳು ಸೇರಿ ಒಂದೇ ಕುಟುಂಬದ ಐವರು ಮೃತ್ಯು

12:03 PM Oct 09, 2023 | Team Udayavani |

ಚಂಡೀಗಢ: ಫ್ರಿಡ್ಜ್ ಕಂಪ್ರೆಸ ಸ್ಪೋಯಗೊಂಡು ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಐವರು ಮೃತಪಟ್ಟಿರುವ ಘಟನೆ ಪಂಜಾಬ್‌ನ ಜಲಂಧರ್‌ನಲ್ಲಿ ನಡೆದಿರುವುದಾಗಿ ಪಂಜಾಬ್ ಪೊಲೀಸರು ತಿಳಿಸಿದ್ದಾರೆ.

Advertisement

ಮೃತರನ್ನು ಯಶಪಾಲ್ ಘಾಯ್ (70), ರುಚಿ ಘಾಯ್ (40), ಮನ್ಶಾ (14), ದಿಯಾ (12) ಮತ್ತು ಅಕ್ಷಯ್ (10) ಎಂದು ಗುರುತಿಸಲಾಗಿದೆ.

ನಗರದ ಅವತಾರ್ ನಗರ ಪ್ರದೇಶದಲ್ಲಿ ಭಾನುವಾರ ರಾತ್ರಿ ಈ ಘಟನೆ ನಡೆದಿದೆ. ಸ್ಫೋಟದ ನಂತರ ಮನೆಗೆ ಬೆಂಕಿ ಹೊತ್ತಿಕೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಐವರನ್ನು ಜಲಂಧರ್ ಸಿವಿಲ್ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅಷ್ಟೋತ್ತಿಗಾಗಲೇ ಅವರ ಪ್ರಾಣ ಪಕ್ಷಿ ಹಾರಿಹೋಗಿತ್ತು ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಘಟನಾ ಸ್ಥಳಕ್ಕೆ ವಿಧಿ ವಿಜ್ಞಾನ ತಂಡ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು ಮಾದರಿಗಳನ್ನು ಸಂಗ್ರಹಿಸಿದೆ.

Advertisement

ಘಟನೆ ಕುರಿತು ಮಾಹಿತಿ ನೀಡಿದ ಹಿರಿಯ ಪೊಲೀಸ್ ಅಧಿಕಾರಿ, ಅವತಾರ್ ನಗರದ ಮನೆಯೊಂದರಲ್ಲಿ ಫ್ರಿಡ್ಜ್ ಕಂಪ್ರೆಸರ್ ಸ್ಫೋಟಗೊಂಡಿರುವ ಕುರಿತು ಮಾಹಿತಿ ಬಂದಿದ್ದು ಕೂಡಲೇ ರಕ್ಷಣಾ ತಂಡ ಹಾಗೂ ಸಿಬಂದಿಗಳ ಜೊತೆ ಘಟನಾ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯ ನಡೆಸಿ ಐವರನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಿದೆವು ಆದರೆ ಘಟನೆಯಲ್ಲಿ ಯಾರು ಬದುಕುಳಿಯಲಿಲ್ಲ ಎಂದು ಹೇಳಿದ್ದಾರೆ.

ಸ್ಪೋಟದ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: CWC2023: ಪ್ಲ್ಯಾನ್ ಮಾಡಿದ್ದು ಒಂದು, ಆಗಿದ್ದು ಮತ್ತೊಂದು; ರಾಹುಲ್ ಈ ಅಚ್ಚರಿಯ ಕಾರಣ ಬಹಿರಂಗ

Advertisement

Udayavani is now on Telegram. Click here to join our channel and stay updated with the latest news.

Next