Advertisement

ನಿಲ್ಲದ ಅಟ್ಟಹಾಸ: ಉಗ್ರರ ದಾಳಿಗೆ ನಿನ್ನೆ ಐವರು ಯೋಧರು, ಇಂದು ಮೂವರು ಯೋಧರು ಹುತಾತ್ಮ

08:22 AM May 05, 2020 | Nagendra Trasi |

ಜಮ್ಮು: ಜಮ್ಮು-ಕಾಶ್ಮೀರದ ಹಂದ್ವಾರದಲ್ಲಿ ಉಗ್ರರ ಅಟ್ಟಹಾಸಕ್ಕೆ ಐವರು ಯೋಧರು ಹುತಾತ್ಮರಾದ ಬೆನ್ನಲ್ಲೇ ಜಮ್ಮು-ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಸೋಮವಾರ ಉಗ್ರರ ದಾಳಿಗೆ ಮೂವರು ಸಿಆರ್ ಪಿಎಫ್ ಯೋಧರು ಹುತಾತ್ಮರಾಗಿರುವ ಘಟನೆ ನಡೆದಿದೆ ಎಂದು ವರದಿ ತಿಳಿಸಿದೆ.

Advertisement

ವರದಿಯ ಪ್ರಕಾರ, ಹಂದ್ವಾರದ ಖ್ವಾಜಿಯಾಬಾದ್ ಸಮೀಪ ಪಹರೆ ನಡೆಸುತ್ತಿದ್ದ ಸಿಆರ್ ಪಿಎಫ್ ಮೇಲೆ ಉಗ್ರರು ದಾಳಿ ನಡೆಸಿರುವುದಾಗಿ ಎಎನ್ ಐ ವರದಿ ಮಾಡಿದೆ. ಘಟನಾ ಸ್ಥಳಕ್ಕೆ ಹೆಚ್ಚುವರಿ ಸೇನಾ ಪಡೆಯನ್ನು ರವಾನಿಸಲಾಗಿದೆ ಎಂದು ವರದಿ ವಿವರಿಸಿದೆ.

ಭದ್ರತಾ ಪಡೆಯ ಗುಂಡಿನ ದಾಳಿಗೆ ಉಗ್ರನೊಬ್ಬ ಸಾವನ್ನಪ್ಪಿದ್ದು, ಈತ ಯಾವ ಸಂಘಟನೆಗೆ ಸೇರಿದ್ದಾನೆ ಎಂಬುದು ಇನ್ನಷ್ಟೇ ತಿಳಿದು ಬರಬೇಕಾಗಿದೆ. ಇಡೀ ಪ್ರದೇಶವನ್ನು ಸುತ್ತುವರಿದಿದ್ದು, ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಹಂದ್ವಾರ ಪ್ರದೇಶದಲ್ಲಿಯೇ ಭದ್ರತಾ ಪಡೆ ಮತ್ತು ಉಗ್ರರ ನಡುವೆ ನಡೆದ ಎನ್ ಕೌಂಟರ್ ನಲ್ಲಿ ಇಬ್ಬರು ಉಗ್ರರು ಸಾವನ್ನಪ್ಪಿದ್ದರು. ಅಲ್ಲದೇ ಇಬ್ಬರು ಸೇನಾ ಅಧಿಕಾರಿಗಳು ಸೇರಿದಂತೆ ಐವರು ಹುತಾತ್ಮರಾಗಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next