ಬೆಂಗಳೂರು: ಹದಿನಾರನೇ ವಿಧಾನಸಭೆಯ ಮೊದಲ ಅಧಿವೇಶನ ಸೋಮವಾರ ಆರಂಭಗೊಳ್ಳಲಿದ್ದು, ಬುಧವಾರದವರೆಗೆ ನಡೆಯಲಿದೆ.
ಸೋಮವಾರ ಬೆಳಗ್ಗೆ 11 ಗಂಟೆಗೆ ಅಧಿವೇಶನ ಆರಂಭ ಆಗಲಿದ್ದು, ಹಂಗಾಮಿ ಸ್ಪೀಕರ್ ಆರ್.ವಿ. ದೇಶಪಾಂಡೆ ನೂತನ ಶಾಸಕರಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ. ಇದಕ್ಕೂ ಮೊದಲು ಹಂಗಾಮಿ ಸ್ಪೀಕರ್ ಆರ್.ವಿ. ದೇಶಪಾಂಡೆ ಅವರು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಂದ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಈ ಅಧಿವೇಶನದಲ್ಲಿ ಪ್ರಮಾಣ ವಚನ ಹೊರತುಪಡಿಸಿ ಬೇರೆ ಇನ್ಯಾವುದೇ ಕಲಾಪಗಳು ನಡೆಯುವುದಿಲ್ಲ. ಇಷ್ಟು ದಿನಗಳ ಕಾಲ ಆಡಳಿತ ಪಕ್ಷದಲ್ಲಿದ್ದ ಬಿಜೆಪಿ ಈಗ ವಿಪಕ್ಷ ಸ್ಥಾನವನ್ನು ಅಲಂಕರಿಸಲಿದೆ. ಬಿ.ಎಸ್. ಯಡಿಯೂರಪ್ಪ, ಜಗದೀಶ್ ಶೆಟ್ಟರ್, ಕೆ.ಎಸ್.ಈಶ್ವರಪ್ಪ ಸಹಿತ ಕೆಲವು ಪ್ರಮುಖರ ಅನುಪಸ್ಥಿತಿ ಎದ್ದು ಕಾಣಲಿದೆ.
ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅಧಿವೇಶನದ ಕೊನೆಯ ದಿನ ಪ್ರಮಾಣ ವಚನ ಸ್ವೀಕರಿಸಬಹುದು ಎನ್ನಲಾಗುತ್ತಿದೆ.