Advertisement

ಕರಾವಳಿ, ಮಲೆನಾಡಿನಲ್ಲಿ ಆ.2 ರಿಂದ 3 ದಿನ ಭಾರೀ ಮಳೆ; ಆರೇಂಜ್‌ ಅಲರ್ಟ್‌

09:57 PM Jul 30, 2022 | Team Udayavani |

ಬೆಂಗಳೂರು: ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಆ.2ರಿಂದ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದ್ದು, ಆರೇಂಜ್‌ ಅಲರ್ಟ್‌ ಘೋಷಿಸಿದೆ.

Advertisement

ಈ ಸಂಬಂಧ ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಸೇರಿ 6 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ನೀಡಲಾಗಿದೆ.

ಉಳಿದಂತೆ ದಕ್ಷಿಣ ಒಳನಾಡು ಜಿಲ್ಲೆಗಳಾದ ತುಮಕೂರು, ಮೈಸೂರು, ಮಂಡ್ಯ, ಹಾಸನ, ದಾವಣಗೆರೆ, ಚಿತ್ರದುರ್ಗ, ಚಾಮರಾಜನಗರ ಮತ್ತು ಉತ್ತರ ಒಳನಾಡು ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿ ಸೇರಿ ಒಟ್ಟಾರೆ 12 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ನೀಡಲಾಗಿದೆ.

ಶುಕ್ರವಾರ ದಕ್ಷಿಣ ಕನ್ನಡ ಜಿಲ್ಲೆಯ ಪಣಂಬೂರಿನಲ್ಲಿ 13 ಸೆಂ.ಮೀ ಮಳೆಯಾಗಿದೆ. ವಿಜಯಪುರದ ದೇವರ ಹಿಪ್ಪರಗಿ, ಕಲಬುರಗಿ ಜಿಲ್ಲೆಯ ಗಾಣಗಾಪುರದಲ್ಲಿ ತಲಾ 9 ಸೆಂ.ಮೀ. ಹಾಗೂ ಮಂಗಳೂರು ವಿಮಾನ ನಿಲ್ದಾಣ, ದಾವಣಗೆರೆ ಜಿಲ್ಲೆಯ ಸಂತೆಬೆನ್ನೂರಿನಲ್ಲಿ ತಲಾ 8 ಸೆಂ.ಮೀ. ಮಳೆಯಾಗಿದೆ ಎಂದು ಬೆಂಗಳೂರು ಹವಾಮಾನ ಕೇಂದ್ರ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next