Advertisement
ಜಮಖಂಡಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಬಿಜೆಪಿ ಸರ್ಕಾರ ಬೀಳಿಸಲು ನಾವೇನು ಕೈ ಹಾಕಲ್ಲ. ಹಸ್ತಕ್ಷೇಪ ಮಾಡಲು ನನಗೆ ಇಷ್ಟವೂ ಇಲ್ಲ. ಖಾತೆ ಹಂಚಿಕೆ ವೇಳೆ ಬಿಜೆಪಿಯಲ್ಲಿ ಹಿರಿತನಕ್ಕೆ ಬೆಲೆ ಕೊಟ್ಟಿಲ್ಲ ಎಂಬುದು ಸ್ಪಷ್ಟ. ಕೆ.ಎಸ್.ಈಶ್ವರಪ್ಪ, ಆರ್. ಅಶೋಕ ಹಿಂದೆಯೇ ಉಪ ಮುಖ್ಯಮಂತ್ರಿಯಾಗಿದ್ದವರು. ಜಗದೀಶ ಶೆಟ್ಟರ ಸಿಎಂ ಆಗಿದ್ದರು. ಅವರನ್ನು ಡಿಸಿಎಂ ಮಾಡಿಲ್ಲ. ಲಕ್ಷ್ಮಣ ಸವದಿ ಈ ಹಿಂದೆ ಶಾಸಕರಾದವರು. ಅವರನ್ನು ಡಿಸಿಎಂ ಮಾಡಿದ್ದಾರೆ’ ಎಂದರು.
ಬೆಂಗಳೂರು: “ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಒಂದು ತಿಂಗಳಾಗಿದೆ. ಇನ್ನೂ ಖಾತೆ ಹಂಚಿಕೆಯ ಕಚ್ಚಾಟದಲ್ಲಿಯೇ ಕಾಲ ಕಳೆಯುತ್ತಿದ್ದಾರೆ’ ಎಂದು ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, “ಬಿಜೆಪಿಯವರು ಕಾಂಗ್ರೆಸ್ ಹೈಕಮಾಂಡ್ ಸಂಸ್ಕೃತಿ ಬಗ್ಗೆ ಲೇವಡಿ ಮಾಡುತ್ತಿದ್ದರು. ಈಗ ಅವರೇನು ಮಾಡುತ್ತಿದ್ದಾರೆ? ಅಧಿಕಾರ ಹಿಡಿದುಕೊಂಡು ದೆಹಲಿ, ಬೆಂಗಳೂರು ತಿರುಗಾಡುತ್ತಿದ್ದಾರೆ.
Related Articles
Advertisement
ಸರ್ಕಾರ ಟೇಕ್ ಆಫ್ ಆಗುವುದು ಯಾವಾಗ?ಬೆಂಗಳೂರು: “ಯಡಿಯೂರಪ್ಪ ಮುಖ್ಯಮಂತ್ರಿ ಯಾಗಿ ಪ್ರಮಾಣ ವಚನ ಸ್ವೀಕರಿಸಲು 3 ದಿನ, ಸಂಪುಟ ರಚನೆಗೆ 26 ದಿನ ಮತ್ತು ಖಾತೆ ಹಂಚಿಕೆಗೆ 6 ದಿನ ತೆಗೆದುಕೊಂಡಿದ್ದಾರೆ. ಭಿನ್ನಮತ ಶಮನಕ್ಕೆ ಎಷ್ಟು ದಿನ ಬೇಕು? ಈ ಎಲ್ಲದರ ನಡುವೆ ನಿಮ್ಮ ಸರ್ಕಾರ ಟೇಕ್ ಆಫ್ ಆಗುವುದು ಯಾವಾಗ?’ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ರಾಜ್ಯದ ಸದ್ಯದ ಬಿಜೆಪಿಯ ಪರಿಸ್ಥಿತಿಯ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಸಂಪುಟ ರಚನೆ, ಖಾತೆ ಹಂಚಿಕೆಯ ಕಸರತ್ತು ಗಮನಿಸಿದರೆ, ಜನ ಪ್ರತಿನಿಧಿಗಳ ಧ್ವನಿ ಉಡುಗಿಹೋಗಿ ಸಂವಿಧಾನ ಬಾಹಿರ ಶಕ್ತಿಗಳೇ ವಿಜೃಂಭಿಸುತ್ತಿರುವ ಹಾಗೆ ಕಾಣಿಸುತ್ತಿದೆ ಎಂದು ಆರೋಪಿಸಿದ್ದಾರೆ. ಯಡಿಯೂರಪ್ಪ ಅನುಭವಿ ಸುತ್ತಿರುವ ನೋವು, ಅವಮಾನ, ಅನ್ಯಾಯ, ಅಸಂ ತೋಷವನ್ನು ನೋಡಿದರೆ, ಅವರ ರಾಜಕೀಯ ಎದು ರಾಳಿಯಾದ ನನ್ನಂಥವನಿಗೂ ಅವರ ಬಗ್ಗೆ ಅನುಕಂಪ ಮೂಡುವಂತಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.