Advertisement

ಅಮೇರಿಕಾದ ಮಿಚಿಗನ್ ಯೂನಿವರ್ಸಿಟಿ ಬಳಿ ಗುಂಡಿನ ದಾಳಿ 3 ಸಾವು, ಹಲವರಿಗೆ ಗಾಯ

04:17 PM Feb 14, 2023 | Team Udayavani |

ಅಮೇರಿಕಾ: ಸೋಮವಾರ ರಾತ್ರಿ ಮಿಚಿಗನ್ ಸ್ಟೇಟ್ ಯೂನಿವರ್ಸಿಟಿಯ ಮುಖ್ಯ ಕ್ಯಾಂಪಸ್‌ನಲ್ಲಿ ಬಂದೂಕುಧಾರಿಯೊಬ್ಬ ಗುಂಡಿನ ದಾಳಿ ನಡೆಸಿದ ಪರಿಣಾಮ ಮೂವರು ಸಾವನ್ನಪ್ಪಿದ್ದು ಐವರು ಗಂಭೀರ ಗಾಯಗೊಂಡಿದ್ದಾರೆಂದು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Advertisement

ಪೋಲೀಸರ ಮಾಹಿತಿಯಂತೆ ಸೋಮವಾರ ರಾತ್ರಿ ಸುಮಾರು 8 ಗಂಟೆಯ ವೇಳೆಗೆ ಮುಸುಕುಧಾರಿ ವ್ಯಕ್ತಿಯೊಬ್ಬ ಮಿಚಿಗನ್ ಸ್ಟೇಟ್ ಯೂನಿವರ್ಸಿಟಿಯ ಕ್ಯಾಂಪಸ್ ಹಾಗೂ ಬರ್ಕಿ ಹಾಲ್ ಎರಡು ಪ್ರದೇಶಗಳಲ್ಲಿ ಗುಂಡಿನ ದಾಳಿ ನಡೆಸಿದ್ದಾನೆ ಇದರಿಂದ ಮೂವರು ಸಾವನ್ನಪ್ಪಿದ್ದು ಐವರು ಗಂಭೀರ ಗಾಯಗೊಂಡಿದ್ದು ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿ ಕ್ರಿಸ್ ರೋಜ್‌ಮನ್ ಹೇಳಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಅಲ್ಲಿನ ಸಿಸಿ ಕ್ಯಾಮೆರಾದಲ್ಲಿ ದೃಶ್ಯಾವಳಿಗಳು ಸೆರೆಯಾಗಿದ್ದು ಅದರ ಆದರದ ಮೇಲೆ ಪೊಲೀಸರು ಬಂಧೂಕುದಾರಿಯನ್ನು ಪತ್ತೆಹಚ್ಚುವ ಕಾರ್ಯಕ್ಕೆ ಮುಂದಾಗಿದ್ದಾರೆ.

ಇದನ್ನೂ ಓದಿ: ಒತ್ತುವರಿ ತೆರವು ವೇಳೆ ಗುಡಿಸಲಿಗೆ ಬೆಂಕಿ: ತಾಯಿ – ಮಗಳು ಸಜೀವ ದಹನ

Advertisement

Udayavani is now on Telegram. Click here to join our channel and stay updated with the latest news.

Next