ಚೆನ್ನೈ: ಕಾರ್ಖಾನೆಯಲ್ಲಿ ಅಕ್ರಮವಾಗಿ ಪಟಾಕಿ ತಯಾರಿಸುತ್ತಿದ್ದ ವೇಳೆ ಸಂಭವಿಸಿದ ಸ್ಫೋಟದ ಪರಿಣಾಮ ಮಗು ಸೇರಿದಂತೆ ಮೂವರು ಸಾವನ್ನಪ್ಪಿರುವ ಘಟನೆ ಸೋಮವಾರ(ಜೂನ್ 21) ತಮಿಳುನಾಡಿನಲ್ಲಿ ನಡೆದಿದೆ. ಮೃತಪಟ್ಟವರಲ್ಲಿ ಇಬ್ಬರು ಮಹಿಳೆಯರು ಎಂದು ವರದಿ ತಿಳಿಸಿದೆ.
ಇದನ್ನೂ ಓದಿ:ಲಾಕ್ ಡೌನ್ ನಲ್ಲಿ ಅಬಕಾರಿ ಇಲಾಖೆಗೆ ಶೇ.10 ರಷ್ಟು ಹೆಚ್ಚು ಲಾಭ: ಸಚಿವ ಗೋಪಾಲಯ್ಯ
ತಮಿಳುನಾಡು ರಾಜಧಾನಿ ಚೆನ್ನೈನಿಂದ 500 ಕಿಲೋ ಮೀಟರ್ ದೂರದಲ್ಲಿರುವ ವಿರುಧುನಗರ್ ಜಿಲ್ಲೆಯ ಶಿವಕಾಶಿ ಸಮೀಪದ ಥಾಯಿಲ್ ಪಟ್ಟಿಯ ಪಟಾಕಿ ತಯಾರಿಕಾ ಘಟಕದಲ್ಲಿ ನಡೆದ ಸ್ಫೋಟ ಪ್ರಕರಣದಲ್ಲಿ ಮೂವರು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿರುವುದಾಗಿ ವರದಿ ತಿಳಿಸಿದೆ.
ತಮಿಳುನಾಡಿನಲ್ಲಿ ಶಿವಕಾಶಿ ಪಟಾಕಿ ತಯಾರಿಕೆಯ ಅತೀ ದೊಡ್ಡ ಉತ್ಪಾದನಾ ಕೇಂದ್ರವಾಗಿದೆ. ಶಿವಕಾಶಿಯಿಂದ ಭಾರತದಾದ್ಯಂತ ಶೇ.90-95ರಷ್ಟು ಪಟಾಕಿ ಸರಬರಾಜು ಮಾಡಲಾಗುತ್ತದೆ.
Updated…