ಶ್ರೀನಗರ್: ಕ್ಷೇತ್ರ ಪುನರ್ ವಿಂಗಡಣಾ ಆಯೋಗದ ವಿರುದ್ಧ ಹಮ್ಮಿಕೊಂಡಿರುವ ಪ್ರತಿಭಟನೆಯನ್ನು ತಡೆಯುವ ನಿಟ್ಟಿನಲ್ಲಿ ಜಮ್ಮು ಕಾಶ್ಮೀರದ ಮೂವರು ಮಾಜಿ ಮುಖ್ಯಮಂತ್ರಿಗಳನ್ನು ಗೃಹಬಂಧನದಲ್ಲಿ ಇರಿಸಲಾಗಿದೆ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ:ಇಂಗ್ಲೆಂಡ್-ಐರ್ಲೆಂಡ್ ವಿರುದ್ಧದ ಸರಣಿಗೆ ವಿಂಡೀಸ್ ತಂಡ ಪ್ರಕಟ: ಸ್ಥಾನ ಪಡೆಯದ ಗೇಲ್
ಬಿಗಿ ಭದ್ರತೆ ಹೊಂದಿರುವ ಶ್ರೀನಗರದಲ್ಲಿನ ಗುಪ್ಕಾರ್ ರಸ್ತೆಯಲ್ಲಿರುವ ಫಾರೂಖ್ ಅಬ್ದುಲ್ಲಾ, ಮೆಹಬೂಬಾ ಮುಫ್ತಿ ಹಾಗೂ ಒಮರ್ ಅಬ್ದುಲ್ ನಿವಾಸದ ಒಳ ಮತ್ತು ಹೊರ ಹೋಗುವ ದಾರಿಗಳನ್ನು ಬಂದ್ ಮಾಡಲಾಗಿದೆ ಎಂದು ವರದಿ ಹೇಳಿದೆ.
ಈ ಮೂವರು ಮಾಜಿ ಸಿಎಂಗಳ ನಿವಾಸದ ಹೊರಭಾಗದಲ್ಲಿ ಪೊಲೀಸರ ಭದ್ರತಾ ವಾಹನಗಳನ್ನು ನಿಲ್ಲಿಸಲಾಗಿದ್ದು, ಯಾರನ್ನೂ ಈ ದಾರಿಯಲ್ಲಿ ಒಳಗೆ ಮತ್ತು ಹೊರ ಹೋಗಲು ಅನುಮತಿ ನೀಡುತ್ತಿಲ್ಲ ಎಂದು ವರದಿ ತಿಳಿಸಿದೆ.
ಜಮ್ಮು-ಕಾಶ್ಮೀರದ ವಿಧಾನಸಭಾ ಕ್ಷೇತ್ರಗಳನ್ನು ಪುನರ್ ವಿಂಗಡಣೆ ಮಾಡಿರುವ ಕ್ಷೇತ್ರ ಪುನರ್ ವಿಂಗಡಣಾ ಆಯೋಗದ ಪ್ರಸ್ತಾವಿತ ಕರಡಿನ ವಿರುದ್ಧ ಪ್ರತಿಭಟನೆ ನಡೆಸಲಾಗುವುದು ಎಂದು ಗುಪ್ಕಾರ್ ಮೈತ್ರಿಯ ಮುಖ್ಯಸ್ಥ ಫಾರೂಖ್ ಅಬ್ದುಲ್ಲಾ ಘೋಷಿಸಿದ್ದರು.