Advertisement

KRS ಭರ್ತಿಗೆ 3 ಅಡಿ ಬಾಕಿ; 3 ಪ್ರಮುಖ ಅಣೆಕಟ್ಟು ವ್ಯಾಪ್ತಿಯಲ್ಲಿ ನೆರೆ ಭೀತಿ!

12:45 AM Jul 21, 2024 | Team Udayavani |

ಶ್ರೀರಂಗಪಟ್ಟಣ/ಹೊಸಪೇಟೆ/ವಿಜಯಪುರ: ನಿರಂತರ ಮಳೆಯ ಹಿನ್ನೆಲೆಯಲ್ಲಿ ರಾಜ್ಯದ 3 ಪ್ರಮುಖ ಅಣೆಕಟ್ಟುಗಳಾಗಿರುವ ಕೆಆರ್‌ಎಸ್‌, ಆಲಮಟ್ಟಿ ಹಾಗೂ ತುಂಗಭದ್ರಾ ಜಲಾಶಯಗಳಲ್ಲಿ ಒಳಹರಿವು ಭಾರೀ ಪ್ರಮಾಣದಲ್ಲಿ ಹೆಚ್ಚಿದ್ದು, ಜಲಾಶಯಗಳು ತುಂಬಲು ಕೆಲವೇ ಅಡಿ ಬಾಕಿ ಇದೆ. ಈ ಹಿನ್ನೆಲೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ನದಿಗೆ ನೀರು ಹರಿಯಬಿಟ್ಟಿದ್ದು, ನದಿ ತೀರದ ಪ್ರದೇಶಗಳಲ್ಲಿ ಈಗ ಪ್ರವಾಹ ಭೀತಿ ಎದುರಾಗಿದೆ.
ಜಲಾಶಯ ಭರ್ತಿ ಬಳಿಕ ಹೆಚ್ಚಿನ ಪ್ರಮಾಣದಲ್ಲಿ ನೀರನ್ನು ನದಿಗೆ ಬಿಡುವುದರಿಂದ ನದಿ ತೀರದ ಪ್ರದೇ ಶ ಗ ಳಿಗೆ ಹಾನಿಯಾಗುವ ಸಾಧ್ಯತೆಗಳಿವೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಈಗಾ ಗಲೇ ಮೂರೂ ಜಿಲ್ಲೆಯ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ನೀರಾ ವರಿ ಇಲಾಖೆ ಅಧಿಕಾರಿಗಳು ನದಿ ತೀರದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆಯಲ್ಲಿ ತೊಡಗಿದ್ದಾರೆ.

Advertisement

ಕೆಆರ್‌ಎಸ್‌ ಜಲಾಶಯದಲ್ಲಿ ಶನಿವಾರ ನೀರಿನ ಸಂಗ್ರಹ 121 ಅಡಿ ದಾಟಿದ್ದು, ಡ್ಯಾಂನ 10 ಗೇಟ್‌ ಮೂಲಕ 15 ಸಾವಿರ ಕ್ಯುಸೆಕ್‌ ನೀರನ್ನು ಕಾವೇರಿ ನದಿಗೆ ಹರಿಸಲಾಗುತ್ತಿದೆ. ಜಲಾಶಯ ತುಂಬಲು ಇನ್ನು 3 ಅಡಿ ಮಾತ್ರ ಬಾಕಿಯಿದೆ. ಶನಿವಾರ 121 ಅಡಿ ದಾಟಿದ್ದು, 124 ಅಡಿ ದಾಟಿದ ಅನಂತರ ಹೆಚ್ಚು ನೀರನ್ನು ಬಿಟ್ಟರೆ ನದಿ ಪಾತ್ರದಲ್ಲಿರುವ ಗ್ರಾಮಸ್ಥರನ್ನು ತೆರವು ಮಾಡಲಾಗುತ್ತದೆ. ಅಣೆಕಟ್ಟೆಯಿಂದ 1ಲಕ್ಷಕ್ಕೂ ಹೆಚ್ಚು ನೀರನ್ನು ಬಿಟ್ಟರೆ ಕೆಲವು ಗ್ರಾಮಗಳು ಮತ್ತು ಕೃಷಿ ಪ್ರದೇಶಗಳಿಗೆ ಹಾನಿಯಾಗಲಿದ್ದು, ಈ ಹಿನ್ನೆಲೆಯಲ್ಲಿ ಗ್ರಾ.ಪಂ. ಸಹಿತ ಎಲ್ಲ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದು, ಟಾಸ್ಕ್ಫೋರ್ಸ್‌ ರಚಿಸಲಾಗಿದೆ ಎಂದು ಮಂಡ್ಯ ಜಿಲ್ಲಾಧಿಕಾರಿ ಡಾ| ಕುಮಾರ್‌ ತಿಳಿಸಿದ್ದಾರೆ.

ಟಿ.ಬಿ. ಡ್ಯಾಂ ಒಳಹರಿವು ಹೆಚ್ಚಳ
ತುಂಗಭದ್ರಾ ಜಲಾಶಯದ ಮೇಲ್ಭಾಗದಲ್ಲಿ ಸತತ ಮಳೆಯಾಗುತ್ತಿದ್ದು, ಒಳ ಹರಿವು 1.16 ಲಕ್ಷ ಕ್ಯುಸೆಕ್‌ ತಲುಪಿದೆ. ಜಲಾಶಯ 105.788 ಟಿಎಂಸಿ ಸಂಗ್ರಹ ಸಾಮರ್ಥ್ಯ ಹೊಂದಿದ್ದು, ಈಗಾಗಲೇ 65.110 ಟಿಎಂಸಿ ನೀರು ಸಂಗ್ರಹವಾಗಿದೆ. ಡ್ಯಾಂನ ಮಟ್ಟ 1,633.00 ಅಡಿ ಇದ್ದು, ಈಗ 1,621.32 ಅಡಿಯವರೆಗೆ ನೀರು ಬಂದಿದೆ. ಜಲಾಶಯದ ಒಳ ಹರಿವು ಆಧರಿಸಿ ಜಲಾಶಯದಿಂದ ನದಿಗೆ ನೀರು ಹರಿಸಲು ತುಂಗಭದ್ರಾ ಮಂಡಳಿ ಮುಂದಾಗಿದ್ದು ಈ ಸಂಬಂಧ ಮುನ್ನೆಚ್ಚರಿಕೆ ಕ್ರಮಗಳನ್ನೂ ಕೈಗೊಂಡಿದೆ.

ಆಲಮಟ್ಟಿ ತೀರದ ಜನರಿಗೆ ಎಚ್ಚರಿಕೆ
ಆಲಮಟ್ಟಿ ಜಲಾಶಯಕ್ಕೆ ಶನಿವಾರ ಒಳಹರಿವು ಹೆಚ್ಚಿದೆ. ಪರಿಣಾಮ ಶನಿವಾರ ಮಧ್ಯಾಹ್ನದ ವೇಳೆಗೆ 1 ಲಕ್ಷ ಕ್ಯೂಸೆಕ್‌ ನೀರನ್ನು ನದಿಗೆ ಹರಿಸಲಾಗಿದ್ದು, ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ವಿಜಯಪುರ ಜಿಲ್ಲಾಡಳಿತ ಮನವಿ ಮಾಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next