Advertisement

Las Vegas: ನೆವಾಡಾ ವಿಶ್ವವಿದ್ಯಾನಿಲಯದಲ್ಲಿ ಗುಂಡಿನ ದಾಳಿ… ನಾಲ್ವರು ಮೃತ್ಯು

09:38 AM Dec 07, 2023 | Team Udayavani |

ವಾಷಿಂಗ್ಟನ್: ಅಮೆರಿಕದ ಲಾಸ್ ವೇಗಾಸ್‌ನ ನೆವಾಡಾ ವಿಶ್ವವಿದ್ಯಾಲಯದ ಮುಖ್ಯ ಕ್ಯಾಂಪಸ್‌ನಲ್ಲಿ ಬುಧವಾರ ನಡೆದ ಗುಂಡಿನ ದಾಳಿಯಲ್ಲಿ ಕನಿಷ್ಠ ನಾಲ್ಕು ಜನರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗುಂಡಿನ ಚಕಮಕಿಯಲ್ಲಿ ಶಂಕಿತ ವ್ಯಕ್ತಿಯೂ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisement

ಲಾಸ್ ವೇಗಾಸ್ ಸಿಟಿ ಪೊಲೀಸ್ ಇಲಾಖೆ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ‘ಎಕ್ಸ್‌’ ನಲ್ಲಿನ ಗುಂಡಿನ ದಾಳಿಯಲ್ಲಿ ಓರ್ವ ಮೃತಪಟ್ಟಿದ್ದು ಇನ್ನೋರ್ವನನ್ನು ವಶಕ್ಕೆ ಪಡೆಯಲಾಗಿದೆ ಎಂದು ಹೇಳಿದ್ದಾರೆ. ಜೊತೆಗೆ ಈ ಪ್ರದೇಶದಿಂದ ದೂರ ಉಳಿಯುವಂತೆ ಪೊಲೀಸರು ನಾಗರಿಕರಿಗೆ ಮನವಿ ಮಾಡಿದ್ದಾರೆ.

ಬಿಸಿನೆಸ್ ಸ್ಕೂಲ್ ಮತ್ತು ಇತರ ಸೌಲಭ್ಯಗಳನ್ನು ಹೊಂದಿರುವ ನೆವಾಡಾ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿರುವ ಬೀಮ್ ಹಾಲ್ ಪ್ರದೇಶದಲ್ಲಿ ಗುಂಡಿನ ದಾಳಿ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಸದ್ಯ ಗಾಯಗೊಂಡವರ ಸ್ಥಿತಿಗತಿ ಹೇಗಿದೆ ಎಂಬ ಮಾಹಿತಿ ಲಭ್ಯವಾಗಿಲ್ಲ. ಘಟನೆಗೆ ಸಂಬಂಧಿಸಿ ವಿಶ್ವವಿದ್ಯಾಲಯದ ಆಡಳಿತ ಮಂಡಳಿ ತಕ್ಷಣ ವಿದ್ಯಾರ್ಥಿಗಳು ಕ್ಯಾಂಪಸ್ ಬಿಟ್ಟು ಹೊರಉಳಿಯುವಂತೆ ಮನವಿ ಮಾಡಿದೆ. ಆದರೆ ಪೋಲೀಸರ ಹೇಳಿಕೆಯ ಪ್ರಕಾರ ಸದ್ಯದ ಪರಿಸ್ಥಿತಿಯಲ್ಲಿ ಕ್ಯಾಂಪಸ್ ಒಳಗೆ ಯಾವುದೇ ಬೆದರಿಕೆ ಇಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: Cops Suspended: ಕರ್ಣಿ ಸೇನಾ ಮುಖ್ಯಸ್ಥನ ಹತ್ಯೆ… ಇಬ್ಬರು ಪೊಲೀಸ್ ಅಧಿಕಾರಿಗಳ ಅಮಾನತು

Advertisement

Udayavani is now on Telegram. Click here to join our channel and stay updated with the latest news.

Next