Advertisement

ರಾಜಸ್ತಾನದ ಖಾತು ಶಾಮ್ ದೇವಸ್ಥಾನದಲ್ಲಿ ಕಾಲ್ತುಳಿತಕ್ಕೆ ಮೂವರು ಸಾವು, ಇಬ್ಬರಿಗೆ ಗಾಯ

09:46 AM Aug 08, 2022 | Team Udayavani |

ರಾಜಸ್ಥಾನ : ಪುರಾಣ ಪ್ರಸಿದ್ಧ ಖಾತು ಶಾಮ್ ದೇವಸ್ಥಾನದಲ್ಲಿ ಸೋಮವಾರ ಮುಂಜಾನೆ ಕಾಲ್ತುಳಿತ ಸಂಭವಿಸಿ ಮೂರು ಮಂದಿ ಸಾವನ್ನಪಿದ್ದು, ಇಬ್ಬರು ಗಾಯಗೊಂಡಿದ್ದಾರೆ.

Advertisement

ಸೋಮವಾರ ಮುಂಜಾನೆ ಐದು ಗಂಟೆಯ ಸುಮಾರಿಗೆ ದೇವಸ್ಥಾನದ ಮುಂಭಾಗದಲ್ಲಿ ಸಾವಿರಾರು ಮಂದಿ ಭಕ್ತರು ಸೇರಿದ್ದರು ಈ ವೇಳೆ ಭಕ್ತರಿಂದ ನೂಕು ನುಗ್ಗಲು ಪ್ರಾರಂಭಗೊಂಡು ಕಾಲ್ತುಳಿತ ಸಂಭವಿಸಿದೆ, ಈ ವೇಳೆ ಮೂವರು ಸಾವನ್ನಪ್ಪಿದ್ದಾರೆ ಅಲ್ಲದೆ ಇಬ್ಬರು ಗಾಯಗೊಂಡಿದ್ದು ಅವರನ್ನು ಜೈಪುರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮಂಗಳವಾರ ಶುಭದಿನವಾದ ಹಿನ್ನೆಲೆಯಲ್ಲಿ ದೇವಸ್ಥಾನದ ಹೊರಗೆ ಮುಂಜಾನೆಯಿಂದಲೇ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ನೆರೆದಿದ್ದರು ದೇವಾಲಯದ ಬಾಗಿಲು ತೆರೆಯುತ್ತಿದ್ದಂತೆ, ಭಕ್ತರ ನೂಕು ನುಗ್ಗಲು ಹೆಚ್ಚಾಗತೊಡಗಿದೆ ಈ ವೇಳೆ ಕಾಲ್ತುಳಿತ ನಡೆದಿದೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.

ದೇವಸ್ಥಾನದಲ್ಲಿ ಕಾಲ್ತುಳಿತ ಸಂಭವಿಸುವ ಸುದ್ದಿ ತಿಳಿಯುತ್ತಿದ್ದಂತೆ ದೇವಸ್ಥಾನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್ ಅಧಿಕಾರಿಗಳ ತಂಡ ಬಂದು ಭಕ್ತರನ್ನು ನಿಯಂತ್ರಿಸಿದ್ದಾರೆ.

ಇದನ್ನೂ ಓದಿ : ಮೀನುಗಾರಿಕೆಗೆ ಈ ವರ್ಷವೂ ಆರಂಭದಲ್ಲೇ ಅಡ್ಡಿ : ಕಡಲಿಗಿಳಿಯದೆ ದಡದಲ್ಲೇ ಉಳಿದ ಬೋಟುಗಳು

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next