ಬೆಳಗಾವಿ: ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಮತ್ತು ಕಾರು ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟ ದುರ್ಘಟನೆ ರವಿವಾರ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ.
ಸವದತ್ತಿ ತಾಲೂಕಿನ ಚಚಡಿ ಕ್ರಾಸ್‌ಬಳಿ ಈ ದುರ್ಘಟನೆ ಸಂಭವಿಸಿದ್ದು ಕಾರಿನಲ್ಲಿದ್ದ ಮೂವರು ಮೃತಪಟ್ಟ ವರದಿಯಾಗಿದೆ.
ಅಪಘಾತದ ರಭಸಕ್ಕೆ ಬಸ್ಸಿನ ಕೆಳಗೆ ಸಿಲುಕಿರುವ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಅಪಘಾತಕ್ಕೀಡಾದ ಬಸ್ ವಾಸ್ಕೋದಿಂದ ಇಳಕಲ್‌ಗೆ ಹೊರಟಿತ್ತು. ಕಾರು ಬೆಳಗಾವಿಯ ಕಡೆ ಬರುತ್ತಿತ್ತು ಎನ್ನಲಾಗಿದೆ.
ಸುದ್ದಿ ತಿಳಿದ ತಕ್ಷಣ ಹೆಚ್ಚುವರಿ ಪೊಲೀಸ್ ವರಿಷ್ಠಾದಿಕಾರಿ ಅಮರನಾಥ ರೆಡ್ಡಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
Related Articles
ಮೃತ ಪಟ್ಟವರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದ್ದು, ಮುರಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:ಅಕ್ರಮ ಗಣಿಗಾರಿಕೆ ಆರಂಭವಾಗಿದ್ದೇ ಸಿದ್ದರಾಮಯ್ಯ ಕಾಲದಲ್ಲಿ : ಕಟೀಲ್