ಕೊಚ್ಚಿ:ತಿರುವನಂತಪುರಂ, ಕೊಲ್ಲಂ, ಕೊಟ್ಟಾಯಂ ಸೇರಿದಂತೆ ಕೇರಳದ ಹಲವು ಭಾಗಗಳಲ್ಲಿ ಸೋಮವಾರವೂ ಮಳೆಯ ಅಬ್ಬರ ಮುಂದುವರಿದಿದ್ದು, ಮಳೆ ಸಂಬಂಧಿ ಘಟನೆಗಳಿಗೆ 3 ಮಂದಿ ಬಲಿಯಾಗಿದ್ದಾರೆ. ಅಲ್ಲದೇ, ಭಾರೀ ಪ್ರಮಾಣದ ಆಸ್ತಿ ಪಾಸ್ತಿ ಹಾನಿಯೂ ಉಂಟಾಗಿದೆ.
ವಿಶೇಷವೆಂದರೆ, ಈ ತಿಂಗಳಲ್ಲಿ ಕೇರಳವು ಶೇ.105ರಷ್ಟು ಹೆಚ್ಚುವರಿ ಮಳೆಯನ್ನು ಕಂಡಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಎರ್ನಾಕುಳಂ, ಇಡುಕ್ಕಿ, ತ್ರಿಶೂರ್, ಕಲ್ಲಿಕೋಟೆ, ಕಣ್ಣೂರ ಹಾಗೂ ಕಾಸರಗೋಡು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
24 ಗಂಟೆಗಳ ಅವಧಿಯಲ್ಲಿ ಒಂದು ಮನೆ ಸಂಪೂರ್ಣವಾಗಿ ಕುಸಿದು ಬಿದ್ದಿದ್ದು, 28 ಮನೆಗಳಿಗೆ ಭಾಗಶಃ ಹಾನಿಯಾಗಿದೆ. ಇಬ್ಬರು ಮಕ್ಕಳು ಸೇರಿದಂತೆ ಮೂವರು ಅಸುನೀಗಿದ್ದಾರೆ.
ಇದನ್ನೂ ಓದಿ:ಆಧುನಿಕ ತಂತ್ರಜ್ಞಾನ ಆಧಾರಿತ ಕೌಶಲ್ಯ ಅಳವಡಿಸಿಕೊಳ್ಳಿ: ವೆಂಕಯ್ಯ ನಾಯ್ಡು