ಇಸ್ಲಾಮಾಬಾದ್: ಪಾಕಿಸ್ತಾನದ ಸೇನಾ ನೆಲೆಯೊಂದರಲ್ಲಿ ನಡೆದ ಆತ್ಮಹತ್ಯಾ ಬಾಂಬ್ ದಾಳಿಯಲ್ಲಿ ಕನಿಷ್ಠ 23 ಜನರು ಸಾವನ್ನಪ್ಪಿದ್ದಾರೆ ಎಂದು ಸುದ್ದಿ ಸಂಸ್ಥೆ ವರದಿ ಮಾಡಿದೆ. .
ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ತೆಹ್ರೀಕ್-ಎ-ಜಿಹಾದ್ ಪಾಕಿಸ್ತಾನ್ (ಟಿಜೆಪಿ) ದಾಳಿಯ ಹೊಣೆ ಹೊತ್ತುಕೊಂಡಿದೆ ಎಂದು ಹೇಳಲಾಗಿದೆ.
ಮಂಗಳವಾರ ಮುಂಜಾನೆ ದಾಳಿ ನಡೆದಿದ್ದು ಅಫಘಾನ್ ಗಡಿಯ ಸಮೀಪದಲ್ಲಿರುವ ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಡೇರಾ ಇಸ್ಮಾಯಿಲ್ ಖಾನ್ ಜಿಲ್ಲೆಯ ನೆಲೆಯನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗಿದೆ ಎನ್ನಲಾಗಿದೆ.
ಮುಂಜಾನೆ ನಡೆದ ದಾಳಿಯಿಂದಾಗಿ ಸೇನಾ ಧಿರಿಸಿನಲ್ಲಿದ್ದವರು ಸಾವನ್ನಪ್ಪಿದ್ದು ಅವರ ಗುರುತು ಪತ್ತೆಹಚ್ಚುವುದು ಕಷ್ಟ ಸಾಧ್ಯವಾಗಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.
ತಾತ್ಕಾಲಿಕ ಮಿಲಿಟರಿ ನೆಲೆಯಾಗಿ ಬಳಸಲಾಗಿದ್ದ ಶಾಲಾ ಕಟ್ಟಡದ ಬಳಿ ಸ್ಫೋಟಕ ತುಂಬಿದ ವಾಹನವು ಸ್ಫೋಟಗೊಂಡು ಅವಘಡ ಸಂಭವಿಸಿದೆ ಈ ವೇಳೆ ಇಪ್ಪತ್ತಮೂರು ಮಂದಿ ಮೃತಪಟ್ಟರೆ ಸುಮಾರು 27 ಜನರು ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ.
ಘಟನೆಯಿಂದ ಕಟ್ಟಡ ಗೋಡೆಗಳು ಕುಸಿದು ಬಿದ್ದಿದ್ದು ಕಟ್ಟಡದ ಅವಶೇಷಗಳಡಿ ಹಲವು ಮಂದಿ ಸಿಲುಕಿದ್ದಾರೆ ಅವರನ್ನು ರಕ್ಷಣೆ ಮಾಡುವ ಕೆಲಸ ಪ್ರಗತಿಯಲ್ಲಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: Rajasthan: ಇಂದು ರಾಜಸ್ಥಾನ ಬಿಜೆಪಿ ಶಾಸಕಾಂಗ ಪಕ್ಷದ ಸಭೆ… ಸಿಎಂ ಅಭ್ಯರ್ಥಿ ಯಾರು ಗೊತ್ತ?