Advertisement

Haryana: ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 3 ಮೃತ್ಯು, 7 ಮಂದಿಗೆ ಗಾಯ

04:16 PM Sep 28, 2024 | Team Udayavani |

ಹರಿಯಾಣ: ಅಕ್ರಮವಾಗಿ ನಡೆಸುತ್ತಿದ್ದ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದು ಮತ್ತು ಏಳು ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಹರಿಯಾಣದ ಸೋನಿಪತ್ ಜಿಲ್ಲೆಯಲ್ಲಿ ಶನಿವಾರ ಸಂಭವಿಸಿದೆ.

Advertisement

ಇಲ್ಲಿನ ಸ್ಥಳೀಯ ನಿವಾಸಿಯಾದ ವೇದ್ ಎಂಬುವರು ಮನೆಯಲ್ಲೇ ಅಕ್ರಮವಾಗಿ ಪಟಾಕಿಗಳನ್ನು ತಯಾರಿಸುತ್ತಿದ್ದರು ಎನ್ನಲಾಗಿದ್ದು ಮನೆಯ ಕೊನೆಯಲ್ಲಿ ಶೇಖರಿಸಿಡಲಾದ ರಾಸಾಯನಿಕದಿಂದ ಬೆಂಕಿ ಅವಘಡ ಸಂಭವಿಸಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಘಟನೆಯಲ್ಲಿ ಮೂವರ ದೇಹಗಲಿ ಛಿದ್ರಗೊಂಡಿದ್ದು, ಏಳು ಜನರ ಸ್ಥಿತಿ ಗಂಭೀರವಾಗಿದ್ದು ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ಸಿಬಂದಿಗಳು ಧಾವಿಸಿ ಬೆಂಕಿ ನಂದಿಸುವ ಕಾರ್ಯ ನಡೆಸುತ್ತಿದ್ದಾರೆ, ಅಕ್ರಮ ಪಟಾಕಿ ಕಾರ್ಖಾನೆ ನಡೆಸುತ್ತಿದ್ದ ವ್ಯಕ್ತಿ ಸ್ಥಳದಿಂದ ಪರಾರಿಯಾಗಿದ್ದಾನೆ. ಘಟನೆ ಕುರಿತು ಸೋನಿಪತ್ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: Bus Overturns… ಪುರಿ ಜಗನ್ನಾಥನ ದರ್ಶನಕ್ಕೆ ಹೊರಟಿದ್ದ ನಾಲ್ವರು ಯಾತ್ರಿಕರು ಮೃತ್ಯು

Advertisement

Udayavani is now on Telegram. Click here to join our channel and stay updated with the latest news.

Next