ಹರಿಯಾಣ: ಬರ್ತ್‌ಡೇ ಪಾರ್ಟಿ ಮುಗಿಸಿ ಇನ್ನೇನು ಮನೆಗೆ ಹೋರಾಡಬೇಕು ಎನ್ನುವಷ್ಟರಲ್ಲಿ ದುಷ್ಕರ್ಮಿಗಳ ತಂಡವೊಂದು ಮಹಿಳೆ ಸೇರಿದಂತೆ ಮೂವರ ಮೇಲೆ ಗುಂಡಿನ ದಾಳಿ ನಡೆಸಿ ಪರಾರಿಯಾಗಿರುವ ಘಟನೆ ಹರಿಯಾಣದ ಪಂಚಕುಲದಲ್ಲಿ ಭಾನುವಾರ(ಡಿ.22) ತಡರಾತ್ರಿ ಸಂಭವಿಸಿದೆ.
ಮೃತರನ್ನು ದೆಹಲಿಯ ವಿಕ್ಕಿ ಮತ್ತು ವಿಪಿನ್ ಮತ್ತು ಹಿಸಾರ್‌ನ ನಿಯಾ ಎಂದು ಗುರುತಿಸಲಾಗಿದೆ.
ಪೊಲೀಸರ ಮಾಹಿತಿ ಪ್ರಕಾರ ಹತ್ಯೆಯಾದ ಮೂವರು ಪಂಚಕುಲದಲ್ಲಿನ ಹೋಟೆಲ್ ನಲ್ಲಿ ಬರ್ತ್‌ಡೇ ಪಾರ್ಟಿ ಮುಗಿಸಿ ತಮ್ಮ ಮನೆಗೆ ತೆರಳಲು ಪಾರ್ಕಿಂಗ್ ಏರಿಯಾಕ್ಕೆ ಬಂದಿದ್ದರು ಈ ವೇಳೆ ಅಪರಿಚಿತರ ಗುಂಪು ಮೂವರ ಮೇಲೆ ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾರೆ ಎನ್ನಲಾಗಿದೆ, ಘಟನೆಯಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪಿದ್ದು ಹೋಟೆಲ್ ಸಿಬಂದಿಗಳು ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು ಬಳಿಕ ಬಂದ ಪೊಲೀಸರು ರಕ್ತದ ಮಡುವಿನಲ್ಲಿ ಬಿದ್ದಿದ್ದ ಮೂವರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ರವಾನಿಸಿದ್ದಾರೆ.
ಮಾಹಿತಿಯ ಪ್ರಕಾರ ಮೃತಪಟ್ಟ ವಿಕ್ಕಿ ಎಂಬಾತ ಕ್ರಿಮಿನಲ್ ಹಿನ್ನೆಲೆ ಹೊಂದಿದವನಾಗಿದ್ದು ಈಗಾಗಲೇ ಹಲವು ಪ್ರಕರಣಗಳನ್ನು ಎದುರಿಸುತ್ತಿದ್ದಾನೆ ಎಂದು ಹೇಳಲಾಗಿದೆ, ಇದೇ ವೈರತ್ವದಲ್ಲಿ ಗುಂಡು ಹಾರಿಸಿ ಹತ್ಯೆಗೈದಿರುವ ಸಾಧ್ಯತೆ ಇದೆ ಎನ್ನಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಘಟನೆ ನಡೆದ ಸ್ಥಳದ ಸಿಸಿಟಿವಿ ದೃಶ್ಯಾವಳಿಯನ್ನು ಪರಿಶೀಲನೆ ನಡೆಸುತ್ತಿದ್ದು ಆರೋಪಿಗಳನ್ನು ಬಂಧಿಸಲು ಬಲೆ ಬಿಸಿದ್ದಾರೆ.
ಇದನ್ನೂ ಓದಿ: ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ