Advertisement

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

01:41 PM Mar 28, 2024 | Team Udayavani |

ಮಹಾರಾಷ್ಟ್ರ: 10 ನೇ ತರಗತಿ ಪರೀಕ್ಷೆ ನಡೆಯುವ ವೇಳೆ ಉತ್ತರ ಪತ್ರಿಕೆಯನ್ನು ತೋರಿಸಲಿಲ್ಲ ಎಂದು ಕೋಪಗೊಂಡ ಮೂವರು ವಿದ್ಯಾರ್ಥಿಗಳು ತಮ್ಮ ಸಹಪಾಠಿಗೆ ಚೂರಿಯಿಂದ ಇರಿದ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಭೀವಂಡಿಯಲ್ಲಿ ನಡೆದಿದೆ.

Advertisement

ಘಟನೆ ಮಂಗಳವಾರ ನಡೆದಿದ್ದು, ಚಾಕು ಇರಿತಕ್ಕೊಳಗಾದ ವಿದ್ಯಾರ್ಥಿ ಗಾಯಗೊಂಡಿದ್ದು ಆತನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಲಾಗುತ್ತಿದೆ ಎಂದು ಹೇಳಲಾಗಿದೆ.

ಎಸ್‌ಎಸ್‌ ಎಲ್ ಸಿ ಪರೀಕ್ಷೆ ನಡೆಯುತ್ತಿದ್ದ ಸಮಯದಲ್ಲಿ, ಸಂತ್ರಸ್ತ ವಿದ್ಯಾರ್ಥಿ ತನ್ನ ಉತ್ತರ ಪತ್ರಿಕೆಯನ್ನು ಆರೋಪಿ ವಿದ್ಯಾರ್ಥಿಗಳಿಗೆ ತೋರಿಸಲು ನಿರಾಕರಿಸಿದ್ದಾನೆ ಇದರಿಂದ ಕುಪಿತಗೊಂಡ ಮೂವರು ಪರೀಕ್ಷಾ ಕೊಠಡಿಯಿಂದ ಹೊರ ಬಂದ ಕೂಡಲೇ ಆತನನ್ನು ತಡೆದು ಥಳಿಸಿದ್ದಾರೆ ಬಳಿಕ ಚಾಕುವಿನಿಂದ ಇರಿದಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಆಸ್ಪತ್ರೆಗೆ ದಾಖಲಾಗಿದ್ದ ವಿದ್ಯಾರ್ಥಿ ಚಿಕಿತ್ಸೆ ಪಡೆದು ಮನೆಗೆ ವಾಪಸ್ಸಾಗಿದ್ದಾನೆ ಅಲ್ಲದೆ ಜೀವಾಪಾಯದಿಂದ ಪಾರಾಗಿದ್ದಾನೆ ಎಂದು ಹೇಳಲಾಗಿದೆ.

ಮೂವರು ಅಪ್ರಾಪ್ತ ಆರೋಪಿಗಳ ವಿರುದ್ಧ ಭಿವಂಡಿಯ ಶಾಂತಿ ನಗರ ಪೊಲೀಸ್ ಠಾಣೆಯಲ್ಲಿ ಭಾರತೀಯ ದಂಡ ಸಂಹಿತೆ (IPC) ಸೆಕ್ಷನ್ 324 ರ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ.

Advertisement

ಇದನ್ನೂ ಓದಿ: Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

Advertisement

Udayavani is now on Telegram. Click here to join our channel and stay updated with the latest news.

Next