Advertisement

ಗುರುವಾರ ಮತ್ತೆ 3 ಹೊಸ ತಾಲೂಕು ಘೋಷಣೆ

01:01 AM Mar 01, 2019 | |

ಬೆಂಗಳೂರು: ರಾಜ್ಯ ಸರ್ಕಾರ ಹೊಸ ತಾಲೂಕುಗಳ ಘೋಷಣೆಯನ್ನು ಮುಂದು ವರಿಸಿದೆ. ಮುಖ್ಯಮಂತ್ರಿ ಕುಮಾರಸ್ವಾಮಿ ಬಜೆಟ್‌ನಲ್ಲಿ ನಾಲ್ಕು ತಾಲೂಕುಗಳ ಘೋಷಣೆ ಮಾಡಿದ್ದರು.

Advertisement

ಅವುಗಳ ಜತೆಗೆ ಫೆ. 26ರಂದು ನಡೆದ ಸಂಪುಟ ಸಭೆಯಲ್ಲಿ ಹೊಸದಾಗಿ ಐದು ತಾಲೂಕುಗಳನ್ನು ಘೋಷಣೆ ಮಾಡಲಾಗಿತ್ತು. ಗುರುವಾರ ಮತ್ತೆ ಮೂರು ಹೊಸ ತಾಲೂಕುಗಳನ್ನು ಸೇರಿಸಿ, ಒಟ್ಟು ಹನ್ನೆರಡು ಹೊಸ ತಾಲೂಕುಗಳ ರಚನೆಗೆ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಉಲ್ಲಾಳ, ಮೈಸೂರು ಜಿಲ್ಲೆಯ ಸಾಲಿಗ್ರಾಮ ಹಾಗೂ ಹಾಸನ ಜಿಲ್ಲೆಯ ಶಾಂತಿಗ್ರಾಮ ಗುರುವಾರ ಘೋಷಣೆಯಾದ ನೂತನ ತಾಲೂಕುಗಳು.

ಈ ಹಿನ್ನೆಲೆಯಲ್ಲಿ ರಾಮನಗರ ಜಿಲ್ಲೆಯ ಹಾರೋಹಳ್ಳಿ, ಚಿಕ್ಕಬಳ್ಳಾಪುರ ಜಿಲ್ಲೆಯ ಚೇಳೂರು, ಬಾಗಲಕೋಟೆ ಜಿಲ್ಲೆಯ ತೇರದಾಳ, ಚಿಕ್ಕಮಗಳೂರು ಜಿಲ್ಲೆಯ ಕಳಸ, ಕೊಡಗು ಜಿಲ್ಲೆಯ ಪೊನ್ನಂಪೇಟೆ, ಕುಶಾಲನಗರ, ವಿಜಯಪುರ ಜಿಲ್ಲೆಯ ಆಲಮೇಲ, ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ಹಾಗೂ ಉಲ್ಲಾಳ, ಮೈಸೂರು ಜಿಲ್ಲೆಯ ಸಾಲಿಗ್ರಾಮ, ಹಾಸನ ಜಿಲ್ಲೆಯ ಶಾಂತಿಗ್ರಾಮ ಹಾಗೂ ಬೆಳಗಾವಿ ಜಿಲ್ಲೆಯ ಯರಗಟ್ಟಿಗಳನ್ನು ನೂತನ ತಾಲೂಕುಗಳನ್ನಾಗಿ ಘೋಷಿಸಿ ಕಂದಾಯ ಇಲಾಖೆ ಆದೇಶ ಹೊರಡಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next