Advertisement

ಗುಜರಾತ್: ಭಾರೀ ಮಳೆಗೆ ಮನೆಯ ಗೋಡೆ ಕುಸಿದು ಬಿದ್ದು ಮೂವರು ಸಾವು, ಅಪಾರ ಹಾನಿ

03:14 PM Jun 13, 2022 | Team Udayavani |

ಅಹಮದಾಬಾದ್: ಭಾರೀ ಸಿಡಿಲು, ಮಳೆಯಿಂದಾಗಿ ಮನೆಯ ಗೋಡೆ ಕುಸಿದು ಬಿದ್ದ ಪರಿಣಾಮ ಮೂವರು ಸಾವನ್ನಪ್ಪಿರುವ ಘಟನೆ ಗುಜರಾತ್ ನ ಮೋರ್ಬಿ ಜಿಲ್ಲೆಯಲ್ಲಿ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

Advertisement

ಇದನ್ನೂ ಓದಿ:ಗಾಂಧಿ ಕುಟುಂಬದ 2,000 ಕೋಟಿ ರೂ. ಆಸ್ತಿ ರಕ್ಷಿಸಲು ಕಾಂಗ್ರೆಸ್ ಪ್ರತಿಭಟನೆ: ಸ್ಮೃತಿ ಇರಾನಿ

ಜಿಲ್ಲೆಯ ಹಲವಾಡ ತಾಲೂಕಿನ ಸುಂದರಿಭವಾನಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮೂವರು ನಿದ್ರಿಸುತ್ತಿದ್ದ ವೇಳೆ ಭಾರೀ ಮಳೆಗೆ ಮನೆಯ ಗೋಡೆ ಕುಸಿದು ಬಿದ್ದಿತ್ತು.

ಗೋಡೆ ಕುಸಿದು ಬಿದ್ದ ಪರಿಣಾಮ ಮಹಿಳೆ, ಆಕೆಯ ಪತಿ ಮತ್ತು ಸಹೋದರ ಸ್ಥಳದಲ್ಲೇ ಸಾವನ್ನಪ್ಪಿದ್ದರು. ಇವರೆಲ್ಲಾ 25ರಿಂದ 30 ವರ್ಷದ ವಯಸ್ಸಿನವರಾಗಿದ್ದಾರೆ ಎಂದು ಹಲ್ವಾಡ್ ಪೊಲೀಸ್ ಠಾಣೆಯ ಠಾಣಾಧಿಕಾರಿ ಮಾಹಿತಿ ನೀಡಿರುವುದಾಗಿ ವರದಿಯಾಗಿದೆ.

ಘಟನೆ ಬಗ್ಗೆ ಕೆಲವು ಸ್ಥಳೀಯರು ಮಾಹಿತಿ ನೀಡಿದ ನಂತರ ಸ್ಥಳಕ್ಕೆ ಪೊಲೀಸರು ಆಗಮಿಸಿ, ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಮೋರ್ಬಿ ಆಸ್ಪತ್ರೆಗೆ ರವಾನಿಸಿರುವುದಾಗಿ ವರದಿ ತಿಳಿಸಿದೆ.

Advertisement

ಮತ್ತೊಂದು ಘಟನೆಯಲ್ಲಿ ಭಾನುವಾರ ಭಾರೀ ಸಿಡಿಲಿಗೆ ಮಹಿಳೆಯೊಬ್ಬರು ಸಾವನ್ನಪ್ಪಿದ್ದರು. ಗುಜರಾತ್ ನ 91 ತಾಲೂಕುಗಳಲ್ಲಿ ಭಾರೀ ಗಾಳಿ ಮಳೆಯಾಗಿದ್ದು, ಅಪಾರ ಪ್ರಮಾಣದ ಹಾನಿ ಸಂಭವಿಸಿರುವುದಾಗಿ ವರದಿ ಹೇಳಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next