ಭೋಪಾಲ್: ಬಸ್ ಪಲ್ಟಿಯಾಗಿ ಮೂವರು ಮೃತಪಟ್ಟಿರುವ ಘಟನೆ ಬುಧವಾರ ಮಧ್ಯಪ್ರದೇಶದ ಶಾಹದೋಲ್ ಜಿಲ್ಲೆಯಲ್ಲಿ ಬುಧವಾರ( ಮೇ.24 ರಂದು) ನಡೆದಿರುವುದು ವರದಿಯಾಗಿದೆ.
ಸಿಎಂ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರ ಕಾರ್ಯಕ್ರಮದಲ್ಲಿ ಭಾಗವಹಿಸಲು ಜನ ಪ್ರಯಾಣಿಸುತ್ತಿದ್ದ ವೇಳೆ ಉಮಾರಿಯಾದ ಗಘರ್ ನಾಕಾ ಪ್ರದೇಶದ ಬಳಿ ಈ ಅಪಘಾತ ಸಂಭವಿಸಿದೆ.
ಅತೀ ವೇಗದಲ್ಲಿ ಬಸ್ ಸಾಗುತ್ತಿತ್ತು. ಈ ವೇಳೆ ಮುಂದೆ ಹೋಗುತ್ತಿದ್ದ ಬೈಕ್ ಗೆ ಢಿಕ್ಕಿ ಆಗುವುದನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿಯಾಗಿದೆ. ಬಸ್ ಪಲ್ಟಿಯಾದ ಪರಿಣಾಮ ಬೈಕ್ ಸವಾರರು ಬಸ್ಸಿನಡಿ ಬಿದ್ದು ಮೃತಪಟ್ಟಿದ್ದು, ಮುಂದೆ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೂ ಕೂಡ ಬಸ್ ಢಿಕ್ಕಿ ಹೊಡೆದು ಮೃತಪಟ್ಟಿದ್ದಾನೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ಹೇಳಿದ್ದಾರೆ.
ಗಾಯಾಳುಗಳನ್ನು ಉಮಾರಿಯಾ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.
ಮೃತರಿಗೆ 10 ಲಕ್ಷ ರೂ. ಘೋಷಿಸಿದ್ದು, ಮೃತರ ಕುಟುಂಬದ ಓರ್ವ ಸದಸ್ಯನಿಗೆ ಸರ್ಕಾರಿ ನೌಕರಿ ಕೊಡುವ ಭರವಸೆಯನ್ನು ಸಿಎಂ ನೀಡಿದ್ದಾರೆ. ಘಟನೆ ಬಳಿಕ ಸಿಎಂ ಕಾರ್ಯಕ್ರಮವನ್ನು ರದ್ದು ಮಾಡಲಾಗಿದೆ.