ಪಾಟ್ನಾ: ಬಿಹಾರದಲ್ಲಿ ನಕಲಿ ಮದ್ಯದ ಹಾವಳಿ ಮತ್ತೆ ಜೋರಾಗಿದ್ದು, ನಕಲಿ ಮದ್ಯ ಸೇವಿಸಿ ಮೂವರು ಮೃತಪಟ್ಟಿದ್ದು, ಇನ್ನುಳಿದವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಘಟನೆ ಬೆಳಕಿಗೆ ಬಂದಿದೆ.
ಬಿಹಾರದ ಸಿವಾನ್ ಜಿಲ್ಲೆಯ ಬಾಲಾ ಗ್ರಾಮದಲ್ಲಿ ಭಾನುವಾರ ನಕಲಿ ಮದ್ಯ ಸೇವಿಸಿದ ನಂತರ ಬಳಿಕ ಕೆಲವರ ಆರೋಗ್ಯದಲ್ಲಿ ಏರುಪೇರಾಗಿದೆ. ಘಟನೆ ತಿಳಿಯುತ್ತಲೇ ಆಸ್ಪತ್ರೆಗೆ ಧಾವಿಸಿದ ಜಿಲ್ಲಾ ಮ್ಯಾಜಿಸ್ಟ್ರೇಟ್ ಅಮಿತ್ ಕುಮಾರ್ ಪಾಂಡೆ ಈ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ಕೊಟ್ಟಿದ್ದಾರೆ.
ಬಾಲಾ ಗ್ರಾಮದಲ್ಲಿ ನಕಲಿ ಮದ್ಯ ಸೇವಿಸಿ ಮೂವರು ಮೃತಪಟ್ಟಿದ್ದಾರೆ. ಇನ್ನು ತೀವ್ರ ಅಸ್ವಸ್ಥರಾಗಿರುವ ಜನರು ಸಿವಾನ್‌ನ ಸದರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕುರಿತು ತನಿಖೆ ನಡೆಸುತ್ತಿದ್ದೇವೆ ಎಂದಿದ್ದಾರೆ.
ಈ ಪ್ರಕರಣದಲ್ಲಿ ಒಟ್ಟು ಜನರನ್ನು ಬಂಧಿಸಿ, ಹೆಚ್ಚಿನ ವಿಚಾರಣೆ ನಡೆಸುತ್ತಿದ್ದೇವೆ ಎಂದಿದ್ದಾರೆ.
Related Articles
ಸಾವಿಗೆ ನಿಖರವಾದ ಕಾರಣವನ್ನು ಅವರು ತಿಳಿಸಿಲ್ಲ. ನಕಲಿ ಮದ್ಯ ಸೇವಿಸಿದ ಬಳಿಕ ಅಸ್ವಸ್ಥರಾಗಿದ್ದು ಮಾತ್ರ ಗೊತ್ತಾಗಿದೆ.
ಕಳೆದ ಡಿಸೆಂಬರ್ 2022 ರಲ್ಲಿ, ಬಿಹಾರದ ಛಾಪ್ರಾ ಜಿಲ್ಲೆಯಲ್ಲಿ ಅಕ್ರಮ ಮದ್ಯ ಸೇವಿಸಿ 70 ಜನರು ಸಾವನ್ನಪ್ಪಿದರು. ಛಾಪ್ರಾದ ಕಳ್ಳಭಟ್ಟಿ ದುರಂತ ರಾಷ್ಟ್ರಮಟ್ಟದಲ್ಲಿ ದೊಡ್ಡ ಸುದ್ದಿಯಾಗಿತ್ತು.
ಇದನ್ನೂ ಓದಿ: ಕಾರು – ಟ್ರಕ್ ಮುಖಾಮುಖಿ ಢಿಕ್ಕಿ: ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಸಾವು