ಯಾದಗಿರಿ: ಬುಧವಾರ ಬಿಜೆಪಿ ಜನಾಶೀರ್ವಾದ ಯಾತ್ರೆ ಅಂಗವಾಗಿ ಮಧ್ಯಾಹ್ನ 1ಗಂಟೆಗೆ ಜಿಲ್ಲೆಯ ಯರಗೋಳ ಗ್ರಾಮಕ್ಕೆ ಕೇಂದ್ರ ರಾಸಾಯನಿಕ ಹಾಗೂ ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಆಗಮಿಸಿದ ಸಂದರ್ಭದಲ್ಲಿ ಮೆರವಣಿಗೆಯಲ್ಲಿ ಬಿಜೆಪಿ ಕಾರ್ಯಕರ್ತರು ನಾಡ ಬಂದೂಕು ಮೂಲಕ ಗಾಳಿಯಲ್ಲಿ ಗುಂಡು ಹಾರಿಸಿದ ಪ್ರಕರಣ ಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪ ಎಸಗಿದ ಮೂವರು ಪೊಲೀಸರನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿ.ಬಿ. ವೇದಮೂರ್ತಿ ಅಮಾನತು ಗೊಳಿಸಿದ್ದಾರೆ.
ಕೋವಿಡ್ ವೈರಸ್ ಮೂರನೆ ಅಲೆ ನಿಯಂತ್ರಣಕ್ಕೆ ಸರ್ಕಾರ ಕಟ್ಟುನಿಟ್ಟಿನ ಕ್ರಮ ಜಾರಿಗೊಳಿಸಿದೆ. ಈ ಸಂದರ್ಭದಲ್ಲಿ ಮಾಜಿ ಸಚಿವ, ಬಿಜೆಪಿ ನಾಯಕ ಬಾಬುರಾವ್ ಚಿಂಚನಸೂರ ನೇತೃತ್ವದಲ್ಲಿ ಯರಗೋಳದಲ್ಲಿ ಅಪಾರ ಸಂಖ್ಯೆಯ ಜನರು ಮಾಸ್ಕ್ ಧರಿಸದೆ ಕೇಂದ್ರ ಸಚಿವರ ಅದ್ಧೂರಿ ಮೆರವಣಿಗೆ ಮಾಡಿ ಗಾಳಿಯಲ್ಲಿ ಗುಂಡು ಹಾರಿಸಿ ಸಂಭ್ರಮಿಸಿದ್ದರು. ಕರ್ತವ್ಯಕ್ಕೆ ನಿಯೋಜನೆಗೊಂಡ ಪೊಲೀಸರು ಲೋಪ ಎಸಗಿರುವುದು ಕಂಡುಬಂದಿತ್ತು.
ಇದನ್ನೂ ಓದಿ:ಅಫ್ಘಾನಿಸ್ತಾನದ ಬಹುಕೋಟಿ ಸಂಪತ್ತು ತಾಲಿಬಾನ್ ಉಗ್ರರ ಕೈಗೆ ಸಿಗದು!
ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸ್ ಇಲಾಖೆ ಸಿಬ್ಬಂದಿಗಳನ್ನು ಅಮಾನತುಗೊಳಿದ ವಿಷಯ ಗುರುವಾರ ಬೆಳಗ್ಗೆ ಬಹಿರಂಗವಾಗುತ್ತಿದ್ದಂತೆ ಮಾಜಿ ಸಚಿವ ಬಾಬುರಾವ್ ಚಿಂಚನಸೂರ ಕೈಯಲ್ಲಿ ಬಂದೂಕು ಹಿಡಿದಿದ್ದು ಇನ್ನೊಂದು ವಿವಾದಕ್ಕೆ ಕಾರಣವಾಗಿದೆ.
ಆದರೆ, ಅಮಾಯಕ ನಾಲ್ಕು ಜನರ ಮೇಲೆ ಪ್ರಕರಣ ದಾಖಲಿಸಿ ಜೈಲಿಗಟ್ಟಿದ್ದು ಗುಬ್ಬಿ ಮೇಲೆ ಬ್ರಹ್ಮಾಸ್ತ್ರ ಪ್ರಯೋಗ ಮಾಡಿದಂತೆ ಮೂರು ಜನ ಪೊಲೀಸರನ್ನು ಅಮಾನತುಗೊಳಿಸಿದ್ದು, ಸ್ಥಳದಲ್ಲಿದ್ದ ಹಿರಿಯ ಪೊಲೀಸ ಅಧಿಕಾರಿಗಳು ಎಲ್ಲಾ ಘಟನಾವಳಿಗಳನ್ನು ಗಮನಿಸಿ ಯೂ ಏಕೆ ತಡೆಯಲಿಲ್ಲ ಎನ್ನುವ ಕುರಿತು ತೀವ್ರ ಅಸಮಾಧಾನ ವ್ಯಕ್ತವಾಗುತ್ತಿದೆ.