ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರದಲ್ಲಿ ಉಗ್ರರ ಜತೆಗಿನ ಗುಂಡಿನ ಕಾಳಗದಲ್ಲಿ ಸೇನೆಯ ಇಬ್ಬರು ಯೋಧರು, ಬಿಎಸ್‌ಎಫ್ ನ ಸಿಬ್ಬಂದಿ ಹುತಾತ್ಮರಾಗಿದ್ದಾರೆ. ಕೇರನ್ ವಲಯದಲ್ಲಿ ಈ ಕಾರ್ಯಾಚರಣೆ ನಡೆದಿದೆ.
ಇದಕ್ಕಿಂತಲೂ ಮೊದಲು ಭಾನುವಾರ ಮಚಿಲ್ ಸೆಕ್ಟರ್‌ನಲ್ಲಿ ಎಲ್‌ಒಸಿ ಮೂಲಕ ಒಳ ನುಸುಳಲು ಪ್ರಯತ್ನಿಸುತ್ತಿದ್ದ ಉಗ್ರನನ್ನು ಸೇನೆ ಗುಂಡು ಹಾರಿಸಿ ಕೊಂದಿದೆ. ಈ ಮೂಲಕ ಭಾರತಕ್ಕೆ ಅಕ್ರಮ ಪ್ರವೇಶ ಮಾಡುವ ಯತ್ನಕ್ಕೆ ತಡೆಯೊಡ್ಡಿದೆ.
ಎಲ್‌ಒಸಿ ವಲಯದಲ್ಲಿ ಉಗ್ರರು ಒಳ ನುಸುಳುವ ಪ್ರಯತ್ನ ಮಾಡುತ್ತಿದ್ದಾರೆ ಎಂಬ ಬಗ್ಗೆ ಖಚಿತ ಸುಳಿವು ಸಿಕ್ಕಿತ್ತು. ಹೀಗಾಗಿ, ಕಾರ್ಯಾಚರಣೆ ನಡೆಸುತ್ತಿದ್ದಾಗ ಗುಂಡಿನ ಚಕಮಕಿ ನಡೆದಿದೆ. ಈ ಸಂದರ್ಭದಲ್ಲಿ ಒಬ್ಬ ಉಗ್ರನನ್ನು ಕೊಲ್ಲಲಾಗಿದೆ. ಸೇನೆಯ ಇಬ್ಬರು ಯೋಧರು ಮತ್ತು ಬಿಎಸ್‌ಎಫ್ನ ಯೋಧ ಹುತಾತ್ಮರಾಗಿದ್ದಾರೆ.
ಇದನ್ನೂ ಓದಿ:ಡೆತ್‌ನೋಟ್ ಬರೆದಿಟ್ಟು ಬೆಂಗಳೂರು ವಿವಿಯ ನಿವೃತ್ತ ಪ್ರೊಫೆಸರ್ ನೇಣಿಗೆ ಶರಣು
ಮತ್ತೂಂದೆಡೆ ಕಥುವಾ ಜಿಲ್ಲೆಯ ವ್ಯಾಪ್ತಿಯಲ್ಲಿರುವ ಅಂತಾರಾಷ್ಟ್ರೀಯ ಗಡಿಯಲ್ಲಿ ಶನಿವಾರ ರಾತ್ರಿ 9 ಗಂಟೆಯಿಂದ ಭಾನುವಾರ ಬೆಳಗ್ಗೆ 5 ಗಂಟೆಯ ವರೆಗೆ ಪಾಕಿಸ್ತಾನ ಸೇನೆ ಕದನ ವಿರಾಮ ಉಲ್ಲಂಘಿಸಿ ಗುಂಡಿನ ದಾಳಿ ನಡೆಸಿವೆ. ಅದಕ್ಕೆ ಬಿಎಸ್‌ಎಫ್ ಸಿಬ್ಬಂದಿ ಸೂಕ್ತವೆಂಬಂತೆ ಪ್ರತಿ ಗುಂಡಿನ ದಾಳಿ ನಡೆಸಿದ್ದಾರೆ.