ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ನ ಸೆಡೋವ್ ನಲ್ಲಿ ನಡೆದ ಸ್ಫೋಟದಲ್ಲಿ ಕನಿಷ್ಠ ಮೂವರು ಸೈನಿಕರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ಬಾಡಿಗೆಗೆ ಪಡೆದ ಖಾಸಗಿ ವಾಹನದಲ್ಲಿ ಈ ಸ್ಫೋಟ ಸಂಭವಿಸಿದೆ.
ಕಾಶ್ಮೀರ ಐಜಿಪಿ ವಿಜಯ್ ಕುಮಾರ್ ಮಾತನಾಡಿ, ” ವಾಹನದ ಬ್ಯಾಟರಿ ಸ್ಫೋಟಗೊಂಡಿದೆ ಎನ್ನಲಾಗಿದೆ. ಆದರೆ ವಾಹನಲ್ಲಿ ಮೊದಲೇ ಐಇಡಿ ಇರಿಸಲಾಗಿತ್ತು ಎಂದು ಪೊಲೀಸರು ಶಂಕಿಸಿದ್ದಾರೆ.” ಎಂದಿದ್ದಾರೆ
ಕೆಲವೊಮ್ಮೆ ಖಾಸಗಿ ವಾಹನಗಳನ್ನು ಭದ್ರತಾ ಪಡೆಗಳು ಪ್ರಯಾಣ ಅಥವಾ ರಹಸ್ಯ ಕಾರ್ಯಾಚರಣೆಗಳಿಗೆ ಬಳಸುತ್ತಾರೆ. ಆದರೆ ಸಾಮಾನ್ಯವಾಗಿ ಸಂಪೂರ್ಣವಾಗಿ ಪರಿಶೀಲಿಸಲಾಗುತ್ತದೆ” ಎಂದು ಅವರು ಹೇಳಿದರು.
ಇದನ್ನೂ ಓದಿ:ಮಾಜಿ ಪತ್ನಿ ಅಂಬರ್ ಹರ್ಡ್ ವಿರುದ್ಧ ಮಾನನಷ್ಟ ಮೊಕದ್ದಮೆ ಗೆದ್ದ ಜಾನಿ ಡೆಪ್
“ಶೋಪಿಯಾನ್‌ನ ಸೆಡೋವ್ ನಲ್ಲಿ ಖಾಸಗಿ ಬಾಡಿಗೆ ವಾಹನದೊಳಗೆ ಸ್ಫೋಟ ಸಂಭವಿಸಿದೆ. ಮೂರು ಸೈನಿಕರು ಗಾಯಗೊಂಡಿದ್ದಾರೆ ಮತ್ತು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಸ್ಫೋಟದ ಕುರಿತು ತನಿಖೆ ನಡೆಸಲಾಗುತ್ತಿದೆ” ಎಂದು ಕಾಶ್ಮೀರ ವಲಯ ಪೊಲೀಸರು ಟ್ವೀಟ್ ನಲ್ಲಿ ಹೇಳಿದ್ದಾರೆ.