ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಭಯೋತ್ಪಾದಕರೊಂದಿಗಿನ ಎನ್‌ಕೌಂಟರ್‌ನಲ್ಲಿ ಮೂವರು ಸೇನಾ ಯೋಧರು ಹುತಾತ್ಮರಾಗಿದ್ದಾರೆ ಎಂದು ಭಾರತೀಯ ಸೇನೆ ತಿಳಿಸಿದೆ.
ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಹಾಲನ್ ಅರಣ್ಯ ಪ್ರದೇಶದಲ್ಲಿ ಭಯೋತ್ಪಾದಕರ ಉಪಸ್ಥಿತಿಯ ಬಗ್ಗೆ ಖಚಿತ ಮಾಹಿತಿಯ ಆಧಾರದ ಮೇಲೆ ಶುಕ್ರವಾರ ತಡರಾತ್ರಿ ಶೋಧ ಕಾರ್ಯ ನಡೆದು ಎನ್‌ಕೌಂಟರ್ ನಡೆದಿದೆ ಈ ವೇಳೆ ಭಯೋತ್ಪಾದಕರ ಗುಂಡಿನ ದಾಳಿಗೆ ಮೂವರು ಯೋಧರು ಹುತಾತ್ಮರಾಗಿದ್ದಾರೆ ಎಂದು ಸೇನಾ ಮೂಲಗಳು ಮಾಹಿತಿ ನೀಡಿವೆ.
ಹಾಲನ್ ಅರಣ್ಯ ಪ್ರದೇಶದಲ್ಲಿ ಭಯೋತ್ಪಾದಕರ ಶೋಧ ಕಾರ್ಯ ಮುಂದುವರೆದಿದೆ ಎಂದು ಶ್ರೀನಗರ ಮೂಲದ ಚಿನಾರ್ ಕಾರ್ಪ್ಸ್ ಆಫ್ ಆರ್ಮಿ ಟ್ವೀಟ್ ನಲ್ಲಿ ತಿಳಿಸಿದೆ.
ಕಳೆದ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ, ಪೂಂಚ್ ಮತ್ತು ರಜೌರಿ ಜಿಲ್ಲೆಗಳಲ್ಲಿ ನಡೆದ ಎರಡು ಪ್ರತ್ಯೇಕ ಎನ್‌ಕೌಂಟರ್ ನಲ್ಲಿ ಐವರು ಹಿರಿಯ ಕಮಾಂಡೋಗಳು ಸೇರಿದಂತೆ 10 ಸೇನಾ ಸೈನಿಕರು ಹುತಾತ್ಮರಾಗಿದ್ದಾರೆ.
ಇದನ್ನೂ ಓದಿ: ಉಭಯ ಜಿಲ್ಲೆಯ 1 ಲಕ್ಷ BPL ಕುಟುಂಬಕ್ಕೆ ಅನ್ನ ಭಾಗ್ಯದ ನಗದು ಸಿಗದು