Advertisement

Congress: ಸುಳ್ಳು ಗ್ಯಾರಂಟಿಗೆ 3 ರಾಜ್ಯ ನಾಶ: ಪ್ರಧಾನಿ ಮೋದಿ

01:36 AM Nov 05, 2024 | Team Udayavani |

ರಾಂಚಿ: ಕಾಂಗ್ರೆಸ್‌ನ ಗ್ಯಾರಂಟಿ ಬಗ್ಗೆ ಪ್ರಧಾನಿ ಮೋದಿ ವಾಗ್ಧಾಳಿ ಮುಂದುವರಿಸಿದ್ದು, ಕರ್ನಾಟಕ ಸಹಿತ ಹಲವು ರಾಜ್ಯ ಗಳು ಹಾಳಾಗಲು ಕಾಂಗ್ರೆಸ್‌ ಕಾರಣ ಎಂದು ಆರೋಪಿಸಿದ್ದಾರೆ.

Advertisement

ವಿಧಾನಸಭೆ ಚುನಾವಣೆ ಘೋಷಣೆಯಾದ ಬಳಿಕ ಮೊದಲ ಬಾರಿ ಸೋಮವಾರ ಝಾರ್ಖಂಡ್‌ಗೆ ಭೇಟಿ ನೀಡಿದ ಪ್ರಧಾನಿ, ದೇಶಕ್ಕೆ ಸ್ವಾತಂತ್ರ್ಯ ಬಂದಾಗಿನಿಂದ ಕಾಂಗ್ರೆಸ್‌ ಸುಳ್ಳುಗಳನ್ನೇ ನೆಚ್ಚಿಕೊಂಡಿದೆ.

ಸುಳ್ಳುಗಳನ್ನು ಹಬ್ಬಿ ಸುತ್ತ ಕರ್ನಾಟಕ, ತೆಲಂಗಾಣ, ಹಿಮಾಚಲ ಪ್ರದೇಶದಂಥ ರಾಜ್ಯಗಳನ್ನು ಆ ಪಕ್ಷ ನಾಶ ಮಾಡಿದೆ. ಕಾಂಗ್ರೆಸ್‌ ತನ್ನ ಗ್ಯಾರಂಟಿಗಳ ಮೂಲಕ ರಾಜ್ಯಗಳ ಆರ್ಥಿಕ ಪರಿಸ್ಥಿತಿಯನ್ನು ಹಾಳು ಮಾಡುತ್ತಿದೆ ಎಂದಿದ್ದಾರೆ.

ಕಾಂಗ್ರೆಸ್‌ ಸುಳ್ಳು ಗ್ಯಾರಂಟಿಗಳನ್ನು ಘೋಷಿಸುತ್ತಿದೆ ಎಂಬುದನ್ನು ಸ್ವತಃ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೇ ಒಪ್ಪಿಕೊಂಡಿದ್ದಾರೆ. ಖರ್ಗೆಯವರು ಸತ್ಯ ಒಪ್ಪಿಕೊಂಡದ್ದು ನೋಡಿ ನನಗೇ ಆಶ್ಚರ್ಯವಾಯಿತು ಎಂದು ಮೋದಿ ಹೇಳಿದ್ದಾರೆ.

 

Advertisement
Advertisement

Udayavani is now on Telegram. Click here to join our channel and stay updated with the latest news.

Next