Advertisement
ಚುನಾವಣಾ ಪ್ರಚಾರದ ಹಿನ್ನೆಲೆಯಲ್ಲಿ ರಾಜಸ್ಥಾನದ ಉದಯ್ ಪುರ್ ನಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, 2016ರ ಸೆಪ್ಟೆಂಬರ್ 29ರಂದು ಗಡಿ ನಿಯಂತ್ರಣ ರೇಖೆಯಲ್ಲಿ ನಡೆಸಿದ ಸರ್ಜಿಕಲ್ ದಾಳಿ ಬಗ್ಗೆ ಪದೇ, ಪದೇ ಹೇಳುತ್ತಿದ್ದಾರೆ. ಆದರೆ ಮನಮೋಹನ್ ಸಿಂಗ್ ಅವರ ಅವಧಿಯಲ್ಲಿ ಮೂರು ಬಾರಿ ಸರ್ಜಿಕಲ್ ಸ್ಟ್ರೈಕ್ ನಡೆಸಲಾಗಿತ್ತು. ಇದರ ಬಗ್ಗೆ ನಿಮಗೆ ಗೊತ್ತಾ? ಎಂದು ಪ್ರಶ್ನಿಸಿದ ರಾಹುಲ್, ನಿಜಕ್ಕೂ ಮೋದಿ ಅವರು ಸೇನೆಯ ಸರ್ಜಿಕಲ್ ಸ್ಟ್ರೈಕ್ ಅನ್ನು ರಾಜಕೀಯದ ಸ್ವತ್ತನ್ನಾಗಿ ಮಾಡಿಕೊಳ್ಳುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
Related Articles
Advertisement
ದೊಡ್ಡ, ದೊಡ್ಡ ಕಂಪನಿಗಳಿಗೆ ಬಾಗಿಲನ್ನು ತೆರೆದಿರುವುದು ದೊಡ್ಡ ಹಗರಣವಾಗಿದೆ ಎಂದ ರಾಹುಲ್, ನೋಟು ಅಮಾನ್ಯೀಕರಣ ಮತ್ತು ಜಿಎಸ್ ಟಿ ಜಾರಿಯಿಂದಾಗಿ ದೇಶದ ಆರ್ಥಿಕತೆ ಮತ್ತು ಜನಸಾಮಾನ್ಯರ ಬೆನ್ನೆಲುಬನ್ನೇ ಮುರಿದಂತಾಗಿದೆ ಎಂದು ದೂರಿದರು.