ಕುಲ್ಗಾಂ: ಇಂದು ಮುಂಜಾನೆ ದಕ್ಷಿಣ ಕಾಶ್ಮೀರದ ಕುಲ್ಗಾಂ ಜಿಲ್ಲೆಯ ನಗ್ನಾದ್ ಚಿಮ್ಮರ್ ಪ್ರದೇಶದಲ್ಲಿ ಭಾರತೀಯ ಸೇನಾ ಪಡೆಯು ಎನ್ ಕೌಂಟರ್ ಮೂಲಕ ಮೂವರು ಉಗ್ರರನ್ನು ಸದೆಬಡೆದಿದೆ. ಕಾರ್ಯಾಚರಣೆಯಲ್ಲಿ ಮೂವರು ಯೋಧರು ಕೂಡ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಹತ್ಯೆಯಾದ ಉಗ್ರರ ಗುರುತು ಪತ್ತೆಯಾಗಿಲ್ಲವಾಗಿದ್ದು, ಇನ್ನೂ ಹಲವು ಉಗ್ರರು ಅಡಗಿರುವ ಮಾಹಿತಿಯಿದ್ದು ಭದ್ರತಾಪಡೆ ಕಾರ್ಯಾಚರಣೆ ಮುಂದುವರೆಸಿದೆ.
ಜಮ್ಮು ಕಾಶ್ಮೀರ ಪೊಲೀಸರು, ಭಾರತೀಯ ಸೇನಾ ಪಡೆ, ಸಿಆರ್ ಪಿಎಫ್ ಪಡೆಗಳು ಉಗ್ರರು ಅಡಗಿರುವ ಖಚಿತ ಮಾಹಿತಿ ಪಡೆದು ಜಂಟಿ ಕಾರ್ಯಾಚರಣೆ ಆರಂಭಿಸಿದ್ದು ಮೂವರು ಉಗ್ರರನ್ನು ಎನ್ ಕೌಂಟರ್ ಮಾಡುವಲ್ಲಿ ಯಶಸ್ವಿಯಾಗಿದೆ.
ಕಾರ್ಯಾಚರಣೆ ವೇಳೆ ಉಗ್ರರು ಏಕಾಏಕಿ ಫೈರಿಂಗ್ ಆರಂಭಿಸಿದ್ದರಿಂದ, ಭದ್ರತಾ ಪಡೆಗಳು ಕೂಡ ಸೂಕ್ತ ಪ್ರತ್ಯುತ್ತರ ನೀಡಿದ್ದವು. ಈ ವೇಳೆ ಮೂವರು ಯೋಧರಿಗೂ ಕೂಡ ಗಾಯಗಳಾಗಿವೆ ಎಂದು ತಿಳಿದುಬಂದಿದೆ.
ಈ ವರ್ಷಾರಂಭದಿಂದ ಇಲ್ಲಿಯವರೆಗೂ ಸುಮಾರು 131 ಉಗ್ರರನ್ನು ಎನ್ ಕೌಂಟರ್ ಮೂಲಕ ಹತ್ಯೆ ಮಾಡಲಾಗಿದೆ ಎಂದು ಮಾಧ್ಯಮದ ವರದಿ ತಿಳಿಸಿದೆ.