Advertisement

ಭಾರತೀಯ ಸೇನೆಯ ಜಂಟಿ ಕಾರ್ಯಾಚರಣೆ, ಎನ್ ಕೌಂಟರ್ ಗೆ ಮೂವರು ಜೈಶ್ ಉಗ್ರರು ಬಲಿ

09:16 AM Oct 24, 2019 | Nagendra Trasi |

ಜಮ್ಮು-ಕಾಶ್ಮೀರ: ಜೈಶ್ ಎ ಮೊಹಮ್ಮದ್ ಭಯೋತ್ಪಾದಕ ಸಂಘಟನೆಯ ಮೂವರು ಉಗ್ರರನ್ನು ಭಾರತೀಯ ಸೇನಾಪಡೆಯ ಕಾರ್ಯಾಚರಣೆಯಲ್ಲಿ ಹತ್ಯೆಗೀಡಾಗಿರುವ ಘಟನೆ ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಆವಂತಿಪೋರಾ ಪ್ರದೇಶದಲ್ಲಿ ನಡೆದಿದೆ.

Advertisement

ಉಗ್ರರು ಪಾಕಿಸ್ತಾನ ಮೂಲದ ಜೈಶ್ ಉಗ್ರಗಾಮಿ ಸಂಘಟನೆಗೆ ಸೇರಿದ್ದವರೆಂದು ಡಿಜಿಪಿ ದಿಲ್ ಬಾಗ್ ಸಿಂಗ್ ತಿಳಿಸಿದ್ದು, ಪೂಂಚ್ ಜಿಲ್ಲೆಯ ಮೆಂಧಾರ್ ಸೆಕ್ಟರ್ ಮತ್ತು ಬಾಲಾಕೋಟ್ ನಲ್ಲಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘಿಸಿ ಗುಂಡಿನ ದಾಳಿ ನಡೆಸಲು ಆರಂಭಿಸಿದ ನಂತರ ಭಾರತೀಯ ಸೇನಾಪಡೆ ಕೈಗೊಂಡ ಕಾರ್ಯಾಚರಣೆಯಲ್ಲಿ ಮೂವರು ಉಗ್ರರು ಹತರಾಗಿರುವುದಾಗಿ ವರದಿ ವಿವರಿಸಿದೆ.

ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನ ಮಾನ ನೀಡಿದ್ದ 370ನೇ ವಿಧಿಯನ್ನು ಕೇಂದ್ರ ಸರಕಾರ ರದ್ದುಪಡಿಸಿದ ನಂತರ ಈ ಪ್ರದೇಶದಲ್ಲಿ ಸೇನಾಪಡೆ ಉಗ್ರರ ವಿರುದ್ಧ ನಡೆಸಿದ ಎರಡನೇ ಎನ್ ಕೌಂಟರ್ ಪ್ರಕರಣ ಇದಾಗಿದೆ.

ಆವಂತಿಪೋರಾದ ರಾಜ್ ಪೋರಾ ಪ್ರದೇಶದಲ್ಲಿ ಉಗ್ರರು ಅಡಗಿದ್ದಾರೆಂಬ ಗುಪ್ತಚರ ಇಲಾಖೆಯ ಸುಳಿವಿನ ಮೇರೆಗೆ ಜಮ್ಮು-ಕಾಶ್ಮೀರ ಪೊಲೀಸರು, ಸಿಆರ್ ಪಿಎಫ್ ಮತ್ತು ಆರ್ಮಿ ಜಂಟಿ ಕಾರ್ಯಾಚರಣೆ ನಡೆಸಿತ್ತು.

Advertisement

Udayavani is now on Telegram. Click here to join our channel and stay updated with the latest news.

Next