Advertisement

Jammu: ಕಥುವಾ ಗಡಿಯಲ್ಲಿ ಎನ್‌ಕೌಂಟರ್… 2 ಭಯೋತ್ಪಾದಕರ ಹತ್ಯೆ, ಶೋಧ ಕಾರ್ಯ ಮುಂದುವರಿಕೆ

08:18 PM Sep 11, 2024 | Team Udayavani |

ಶ್ರೀನಗರ: ಜಮ್ಮು – ಕಾಶ್ಮೀರದ ಉಧಮ್‌ಪುರ ಜಿಲ್ಲೆಯ ಕಥುವಾ ಗಡಿ ಭಾಗದಲ್ಲಿ ಬುಧವಾರ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ನಡೆದ ಗುಂಡಿನ ದಾಳಿಯಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ.

Advertisement

ಗಡಿ ಪ್ರದೇಶದಲ್ಲಿ ಭದ್ರತಾ ಪಡೆಗಳು ಇನ್ನೂ ಶೋಧ ಕಾರ್ಯಾಚರಣೆ ನಡೆಸುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಜಮ್ಮು-ಕಾಶ್ಮೀರ ಚುನಾವಣೆಗೂ ಮುನ್ನ ಕಣಿವೆಯಲ್ಲಿ ಭದ್ರತಾ ವ್ಯವಸ್ಥೆ ಹೆಚ್ಚಿಸಲಾಗಿದೆ.

ಈ ಕುರಿತು ಮಾಹಿತಿ ನೀಡಿದ ಅಧಿಕಾರಿಗಳು ಕಥುವಾ ಗಡಿ ಪ್ರದೇಶದ ಅರಣ್ಯದಲ್ಲಿ ಉಗ್ರರು ಇರುವ ಮಾಹಿತಿ ಪಡೆದು ಪೊಲೀಸ್ ಪಡೆ ಹಾಗೂ ಭದ್ರತಾ ಪಡೆ ಜಂಟಿ ಕಾರ್ಯಾಚರಣೆಗೆ ಇಳಿದಿದೆ ಈ ವೇಳೆ ಭದ್ರತಾ ಪಡೆಯ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಲು ಮುಂದಾಗಿದ್ದಾರೆ ಇದಕ್ಕೆ ಪ್ರತಿಯಾಗಿ ಭದ್ರತಾ ಪಡೆ ಹಾಗೂ ಪೊಲೀಸರು ಗುಂಡಿನ ದಾಳಿ ನಡೆಸಿದ್ದು ಘಟನೆಯಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ ಎಂದು ಹೇಳಿದ್ದಾರೆ, ಕಥುವಾ ಅರಣ್ಯ ಪ್ರದೇಶದಲ್ಲಿ ಇನ್ನೂ ಹಲವು ಉಗ್ರರು ರಕ್ಷಣೆ ಪಡೆದುಕೊಂಡಿದ್ದು ಭದ್ರತಾ ಪಡೆ ತಮ್ಮ ಕಾರ್ಯಾಚರಣೆಯನ್ನು ಮುಂದುವರೆಸಿದೆ.

ಇದನ್ನೂ ಓದಿ: Gundlupete: ಟ್ರ್ಯಾಕ್ಟರ್ ನಲ್ಲಿ ಅಕ್ರಮವಾಗಿ ಸ್ಫೋಟಕ ವಸ್ತು ಸಾಗಣೆ… ಇಬ್ಬರ ಬಂಧನ

Advertisement

Udayavani is now on Telegram. Click here to join our channel and stay updated with the latest news.

Next