Advertisement

Encounter: ಸೇನಾ ಕಾರ್ಯಾಚರಣೆ… ಜಮ್ಮು-ಕಾಶ್ಮೀರದಲ್ಲಿ ಮೂವರು ಉಗ್ರರ ಹತ್ಯೆ

10:51 AM Aug 29, 2024 | Team Udayavani |

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಬುಧವಾರ (ಆಗಸ್ಟ್ 28) ನಡೆದ ಎರಡು ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ ಕನಿಷ್ಠ ಮೂವರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Advertisement

ಭಾರತೀಯ ಸೇನೆಯ ಚಿನಾರ್ ಕಾರ್ಪ್ಸ್ ಪ್ರಕಾರ, ಬುಧವಾರ ಕುಪ್ವಾರದ ಮಚಿಲ್ ಸೆಕ್ಟರ್‌ನಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಭದ್ರತಾ ಪಡೆಗಳು ಇಬ್ಬರು ಭಯೋತ್ಪಾದಕರನ್ನು ಹೊಡೆದುಹಾಕಿದ್ದು, ಕುಪ್ವಾರದ ತಂಗ್‌ಧರ್ ಸೆಕ್ಟರ್‌ನಲ್ಲಿ ಮತ್ತೊಬ್ಬ ಭಯೋತ್ಪಾದಕನನ್ನು ಹೊಡೆದುರುಳಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಆಗಸ್ಟ್ 28-29 ರ ಮಧ್ಯರಾತ್ರಿಯಲ್ಲಿ, ತಂಗ್‌ಧರ್ ಸೆಕ್ಟರ್‌ನಲ್ಲಿ ಭಯೋತ್ಪಾದಕರು ಕಾಣಿಸಿಕೊಂಡ ನಂತರ ಭದ್ರತಾ ಪಡೆಗಳು ಬೃಹತ್ ಕಾರ್ಯಾಚರಣೆಯನ್ನು ಪ್ರಾರಂಭಿಸಿದವು. ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ ಇಬ್ಬರನ್ನು ಹತ್ಯೆಮಾಡಲಾಗಿದ್ದು ಇದೆ ವೇಳೆ, ಮಚಿಲ್ ಸೆಕ್ಟರ್‌ನಲ್ಲಿ ಮತ್ತೊಂದು ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು.

ಭಯೋತ್ಪಾದಕರು ಅರಣ್ಯ ಪ್ರದೇಶದಲ್ಲಿ ಸಕ್ರಿಯರಾಗಿರುವ ಮಾಹಿತಿಯ ಮೇರೆಗೆ ಭದ್ರತಾ ಪಡೆ ಕಾರ್ಯಾಚರಣೆ ಮತ್ತೆ ಮುಂದುವರೆಸಿದೆ.

ಇದನ್ನೂ ಓದಿ: Ballari: ನಟ ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್… ಪೊಲೀಸರಿಂದ ಬ್ಯಾಗ್ ಪರಿಶೀಲನೆ

Advertisement

Advertisement

Udayavani is now on Telegram. Click here to join our channel and stay updated with the latest news.

Next