ಬಲ್ಲದು ಎಂದು ವಿಶ್ವ ಆರೋಗ್ಯ ಸಂಸ್ಥೆಯ ಪ್ರಧಾನ ವಿಜ್ಞಾನಿ, ಭಾರತ ಮೂಲದ ಡಾ| ಸೌಮ್ಯಾ ಸ್ವಾಮಿನಾಥನ್ ತಿಳಿಸಿದ್ದಾರೆ.
Advertisement
ಒಮ್ಮೆ ಒಮಿಕ್ರಾನ್‌ನಿಂದ ಗುಣಮುಖರಾದರೂ ಅನಂತರದ 90 ದಿನಗಳಲ್ಲಿ ಪುನಃ ಅದರ ಸೋಂಕಿಗೆ ತುತ್ತಾಗುವ ಸಾಧ್ಯತೆಗಳಿರುತ್ತವೆ ಎಂದು ಅವರು ಹೇಳಿದ್ದಾರೆ. ಒಮಿಕ್ರಾನ್ ರೂಪಾಂತರಿ ಗಂಭೀರ ಅನಾರೋಗ್ಯ ಉಂಟು ಮಾಡುವುದಿಲ್ಲ ಎಂದು ಹೇಳಿರುವ ಅವರು, ಸದ್ಯದ ಅಧ್ಯಯನದ ಪ್ರಕಾರ, ಒಂದೆಡೆ ಸೋಂಕಿನ ಪ್ರಮಾಣ ಹೆಚ್ಚಾಗುತ್ತಿದ್ದರೂ ಆಸ್ಪತ್ರೆಗೆ ಸೇರುವವರ ಪ್ರಮಾಣ ತೀರಾ ಕಡಿಮೆ ಇರುತ್ತದೆ. ಆದರೆ ಆಸ್ಪತ್ರೆಗೆ ಸೇರುವವರ ಪ್ರಮಾಣ ಹೆಚ್ಚಾಗುತ್ತದೆಯೇ ಎಂಬುದರ ಬಗ್ಗೆ ಇನ್ನು 3-4 ವಾರಗಳಲ್ಲಿ ಖಚಿತತೆ ಸಿಗುತ್ತದೆ ಎಂದಿದ್ದಾರೆ.
Related Articles
Advertisement
ಇದನ್ನೂ ಓದಿ:ಹಾವುಗಳ ಹಾವಳಿ ತಡೆಯದೆ ಮನೆಗೇ ಬೆಂಕಿಯಿಟ್ಟ!
ಸಿಂದಿಯಾ ಸೂಚನೆ: ಡಿ. 1ರಂದು ದಿಲ್ಲಿಯಲ್ಲಿನ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೆಚ್ಚಿನ ಜನದಟ್ಟಣೆ ಇರುವ ಪೋಟೋ ಗಳು, ವೀಡಿಯೋಗಳು ಸಾಮಾಜಿಕ ಜಾಲಾತಾಣ ಗಳಲ್ಲಿ ವೈರಲ್ ಆಗಿದ್ದವು. ಇದನ್ನು ಗಮನಿಸಿರುವ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂದಿಯಾ ಜನಸಂದಣಿಯನ್ನು ಸೂಕ್ತವಾಗಿ ನಿರ್ವ ಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಕೊರೊನಾ ತಡೆಯಲು ಚ್ಯುಯಿಂಗ್ಗಮ್ಕೊರೊನಾ ಸೋಂಕಿತರ ಎಂಜಲಿನಿಂದ ಕೊರೊನಾ ಹರಡುವುದನ್ನು ತಡೆಯಬಲ್ಲ ಚ್ಯುಯಿಂಗ್‌ಗಮ್ ಅನ್ನು ಅಮೆರಿಕ ವಿಜ್ಞಾನಿಗಳು ತಯಾರಿಸಿದ್ದಾರೆ. ಕೊರೊನಾ ಬಾಧಿತರ ಬಾಯಿಯಲ್ಲಿರುವ ಜೊಲ್ಲು ಗ್ರಂಥಿಗಳಲ್ಲಿ ಕೊರೊನಾ ವೈರಾಣುಗಳು ಹೆಚ್ಚು ಪ್ರಮಾಣದಲ್ಲಿ ದ್ವಿಗುಣಗೊಳ್ಳುತ್ತವೆ. ಬಾಯಿಯ ಹೊರಸೂಸುವ ಜೊಲ್ಲು, ಉಸಿರಿನಿಂದ ಕೊರೊನಾ ವೈರಾಣುಗಳು ಹರಡುವ ಸಾಧ್ಯತೆಗಳಿರುತ್ತದೆ. ಈ ಚ್ಯುಯಿಂಗ್‌ಗಮ್ ಅನ್ನು ಬಾಯಿಯಲ್ಲಿ ಅಗಿಯುವಾಗ, ಇದು ಜೊಲ್ಲುರಸದಲ್ಲಿರುವ ಕೊರೊನಾ ವೈರಾಣುಗಳನ್ನು ತನಗೆ ಅಂಟಿಕೊಳ್ಳುತ್ತ ವಲ್ಲದೆ, ಜೊಲ್ಲು ಗ್ರಂಥಿಗಳಲ್ಲಿ ದ್ವಿಗುಣಗೊಳ್ಳುವ ಪ್ರಮಾಣ ಗಣನೀಯವಾಗಿ ಕಡಿಮೆ ಮಾಡುತ್ತದೆ ಎಂದು ವಿಜ್ಞಾನಿಗಳು ಹೇಳಿದ್ದಾರೆ. ಅಂದಹಾಗೆ, ಈ ಚ್ಯುಯಿಂಗ್‌ಗಮ್ ಅನ್ನು ಸಸ್ಯಗಳ ಪ್ರೋಟೀನ್‌ಗಳನ್ನು ಬಳಸಿ ತಯಾರಿಸಲಾಗಿದೆಯಂತೆ. ಪರಿಹಾರ ವಿಳಂಬ: ಸುಪ್ರೀಂಕೋರ್ಟ್ ಅಸಮಾಧಾನ
ಕೊರೊನಾದಿಂದ ಮೃತಪಟ್ಟವರ ಸಂಬಂಧಿಕರಿಗೆ ಪರಿಹಾರ ನೀಡುವಲ್ಲಿ ಮಂದಗತಿ ಅನುಸರಿಸುತ್ತಿರುವ ಮಹಾರಾಷ್ಟ್ರ, ಪಶ್ಚಿಮ ಬಂಗಾಳ ಹಾಗೂ ರಾಜಸ್ಥಾನ ಸರಕಾರಗಳನ್ನು ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಇದೇ ಅಕ್ಟೋಬರ್‌ನಲ್ಲಿ ಕೊರೊನಾದಿಂದ ಮೃತಪಟ್ಟ ವ್ಯಕ್ತಿಗಳ ಕುಟುಂಬಗಳಿಗೆ ತಲಾ 50,000 ರೂ. ಪರಿಹಾರ ನೀಡುವ ಪ್ರಸ್ತಾವನೆಗೆ ಸುಪ್ರೀಂಕೋರ್ಟ್ ಒಪ್ಪಿಗೆ ನೀಡಿತ್ತು. ಆದರೆ ಹೆಚ್ಚಿನ ಕುಟುಂಬಗಳಿಗೆ ಪರಿಹಾರ ಇನ್ನೂ ಮರೀಚಿಕೆಯಾಗಿದೆ ಎಂದು ನ್ಯಾಯಪೀಠ ಅಸಮಾಧಾನ ವ್ಯಕ್ತಪಡಿಸಿದೆ. “ಮಹಾರಾಷ್ಟ್ರ ಸರಕಾರದಡಿ, 1 ಲಕ್ಷ ಕುಟುಂಬಗಳಿಗೆ ಈ ಪರಿಹಾರ ಸಿಗಬೇಕಿತ್ತು. ಈವರೆಗೆ ಕೇವಲ 37,000 ಕುಟುಂಬಗಳಿಂದ ಅರ್ಜಿಗಳು ಬಂದಿದ್ದರೂ ಒಬ್ಬರಿಗೂ ಪರಿಹಾರ ಕೊಟ್ಟಿಲ್ಲ. ಇದೇ ನಿಧಾನಗತಿ ರಾಜಸ್ಥಾನ, ಪಶ್ಚಿಮ ಬಂಗಾಳದಲ್ಲೂ ಆಗಿದೆ” ಎಂದು ನ್ಯಾಯಾಲಯ ಅಸಮಾಧಾನ ವ್ಯಕ್ತಪಡಿಸಿದೆ.