ಮಧ್ಯಪ್ರದೇಶ: ಈ ವರ್ಷದ ಕೊನೆಯಲ್ಲಿ ನಡೆಯಲಿರುವ ಮಹತ್ವದ ಮಧ್ಯಪ್ರದೇಶ ವಿಧಾನಸಭಾ ಚುನಾವಣೆಗೆ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೋಮವಾರ ತನ್ನ 39 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನವದೆಹಲಿಯಲ್ಲಿ ಪಕ್ಷದ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆಸಿದ ನಂತರ ಎರಡನೇ ಪಟ್ಟಿ ಬಿಡುಗಡೆ ಮಾಡಿದೆ. ಬಿಜೆಪಿಯ ಎರಡನೇ ಪಟ್ಟಿಯಲ್ಲಿ ಮೂವರು ಕೇಂದ್ರ ಸಚಿವರು ಇದ್ದಾರೆ – ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ಆಹಾರ ಸಂಸ್ಕರಣಾ ಕೈಗಾರಿಕೆಗಳ ರಾಜ್ಯ ಸಚಿವ ಪ್ರಹ್ಲಾದ್ ಸಿಂಗ್ ಪಟೇಲ್ ಮತ್ತು ಗ್ರಾಮೀಣಾಭಿವೃದ್ಧಿ ಮತ್ತು ಉಕ್ಕು ಖಾತೆ ರಾಜ್ಯ ಸಚಿವ ಫಗ್ಗನ್ ಸಿಂಗ್ ಕುಲಸ್ತೆ ಅವರ ಹೆಸರು ಸೇರಿದೆ.
ನರೇಂದ್ರ ಸಿಂಗ್ ತೋಮರ್ ಡಿಮ್ನಿ ಕ್ಷೇತ್ರದಿಂದ ಸ್ಪರ್ಧಿಸಿದರೆ, ಪ್ರಹ್ಲಾದ್ ಸಿಂಗ್ ಪಟೇಲ್ ಮತ್ತು ಫಗ್ಗನ್ ಸಿಂಗ್ ಕುಲಾಸ್ತೆ ಕ್ರಮವಾಗಿ ನರಸಿಂಗ್‌ಪುರ ಮತ್ತು ನಿವಾಸ್‌ನಿಂದ ಸ್ಪರ್ಧಿಸಲಿದ್ದಾರೆ.
ಹೆಚ್ಚುವರಿಯಾಗಿ, ಬಿಜೆಪಿ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗಿಯಾ ಅವರನ್ನು ಇಂದೋರ್-1 ಸ್ಥಾನದಿಂದ ಕಣಕ್ಕಿಳಿಸಲಾಗಿದೆ.
ಈ ಹಿಂದೆ ಬಿಜೆಪಿ ತನ್ನ ಮೊದಲ ಪಟ್ಟಿಯಲ್ಲಿ 37 ಅಭ್ಯರ್ಥಿಗಳ ಹೆಸರನ್ನು ಬಿಡುಗಡೆ ಮಾಡಿತ್ತು. ಈ ಬೆಳವಣಿಗೆಯೊಂದಿಗೆ ಮಧ್ಯಪ್ರದೇಶ ವಿಧಾನಸಭೆಯ 230 ಸ್ಥಾನಗಳ ಪೈಕಿ ಬಿಜೆಪಿ ಈಗ 76 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದಂತಾಗಿದೆ.
ಇದನ್ನೂ ಓದಿ: Hosapete: ಬಸ್ ಪಲ್ಟಿ; 10ಕ್ಕೂ ಹೆಚ್ಚು ಜನರಿಗೆ ಗಾಯ, ಚಾಲಕನ ಸ್ಥಿತಿ ಗಂಭೀರ