Advertisement

Delhi ಆಹಾರ ಸಂಸ್ಕರಣಾ ಫ್ಯಾಕ್ಟರಿಯಲ್ಲಿ ಅಗ್ನಿ ಅನಾಹುತ, ಮೂವರು ಮೃತ್ಯು

12:07 PM Jun 08, 2024 | Team Udayavani |

ನವದೆಹಲಿ: ಆಹಾರ ಸಂಸ್ಕರಣಾ ಫ್ಯಾಕ್ಟರಿಯಲ್ಲಿ ಸಂಭವಿಸಿದ ಅಗ್ನಿ ಅನಾಹುತದಲ್ಲಿ ಮೂವರು ಸಾವನ್ನಪ್ಪಿದ್ದು, ಆರು ಮಂದಿ ಗಾಯಗೊಂಡಿರುವ ಘಟನೆ ಶನಿವಾರ (ಜೂನ್‌ 08) ಉತ್ತರ ದೆಹಲಿಯ ನರೇಲಾ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ.

Advertisement

ಇದನ್ನೂ ಓದಿ:Manchenahalli; ವಿದ್ಯುತ್ ಸ್ಪರ್ಶವಾಗಿ ಕಂಬದಲ್ಲಿಯೇ ಮೃತಪಟ್ಟ ಬೆಸ್ಕಾಂ ಸಿಬ್ಬಂದಿ

ಶ್ಯಾಮ್‌ ಕೃಪಾ ಫುಡ್ಸ್‌ ಪ್ರೈವೇಟ್‌ ಲಿಮಿಟೆಡ್‌ ನಲ್ಲಿ ನಸುಕಿನ ವೇಳೆ ಅಗ್ನಿ ಅನಾಹುತ ಸಂಭವಿಸಿರುವ ಬಗ್ಗೆ ಮಾಹಿತಿ ಬಂದಿರುವುದಾಗಿ ದೆಹಲಿ ಪೊಲೀಸರು ತಿಳಿಸಿದ್ದಾರೆ. ಘಟನೆ ನಡೆದ ಸಂದರ್ಭದಲ್ಲಿ ಫ್ಯಾಕ್ಟರಿಯೊಳಗೆ 9 ಮಂದಿ ಕಾರ್ಮಿಕರಿದ್ದರು ಎಂದು ವರದಿ ಹೇಳಿದೆ.

ಅಗ್ನಿ ಅವಘಡದಲ್ಲಿ ಗಾಯಗೊಂಡವರನ್ನು ತಕ್ಷಣವೇ ಎಸ್‌ ಎಚ್‌ ಆರ್‌ ಸಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದ್ದು, ಅವರಲ್ಲಿ ಮೂವರು ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿರುವುದಾಗಿ ವರದಿಯಾಗಿದೆ.

ಪೊಲೀಸರ ಪ್ರಾಥಮಿಕ ತನಿಖೆ ಪ್ರಕಾರ, ಫ್ಯಾಕ್ಟರಿಯಲ್ಲಿ ಒಣ ಹೆಸರುಬೇಳೆಯನ್ನು ಗ್ಯಾಸ್‌ ನಲ್ಲಿ ಹುರಿಯುತ್ತಿದ್ದಾಗ ಗ್ಯಾಸ್‌ ಪೈಪ್‌ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡಿರುವುದಾಗಿ ತಿಳಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next