Advertisement

40 ಅಡಿ ಬೋರ್‌ವೆಲ್‌ಗೆ ಬಿದ್ದ 3 ವರ್ಷದ ಮಗು ಸುರಕ್ಷಿತವಾಗಿ ಮೇಲಕ್ಕೆ ; Video

05:43 PM Jul 23, 2023 | Team Udayavani |

ನಳಂದ (ಬಿಹಾರ): ಕುಲ್ ಗ್ರಾಮದಲ್ಲಿ ಭಾನುವಾರ ಬೋರ್‌ವೆಲ್‌ಗೆ ಬಿದ್ದ ಮೂರು ವರ್ಷದ ಮಗುವೊಂದನ್ನು ರಕ್ಷಣಾ ಕಾರ್ಯಾಚರಣೆ ನಡೆಸಿ ಸುರಕ್ಷಿತವಾಗಿ ಮೇಲಕ್ಕೆ ತರಲಾಗಿದೆ.

Advertisement

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಮತ್ತು ಇತರ ರಕ್ಷಣಾ ತಂಡಗಳು ನಿರಂತರ 8 ಗಂಟೆಗಳ ಕಾರ್ಯಾಚರಣೆ ನಡೆಸಿ ಶಿವಂ ಎಂಬ ಬಾಲಕನನ್ನು ರಕ್ಷಿಸಲು ಯಶಸ್ವಿಯಾಗಿವೆ.

ಬಾಲಕನನ್ನು ರಕ್ಷಿಸಲು ರಕ್ಷಣಾ ತಂಡಗಳು ಸಮಾನಾಂತರವಾಗಿ ಇನ್ನೊಂದು ರಂಧ್ರವನ್ನು ಅಗೆಯಲಾಗಿದೆ.

ನಾನು ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಮಗ ಆಟವಾಡುತ್ತಿದ್ದ, ಕಾಲು ಜಾರಿ ಬೋರ್‌ವೆಲ್‌ನಲ್ಲಿ ಬಿದ್ದಿದ್ದಾನೆ ಎಂದು ಬಾಲಕನ ತಾಯಿ ಹೇಳಿದ್ದಾರೆ. ಆಮ್ಲಜನಕವನ್ನು ಸರಬರಾಜು ವ್ಯವಸ್ಥೆ ಮಾಡಲಾಗಿತ್ತು. ಬೋರ್‌ವೆಲ್‌ನಿಂದ ಹೊರತೆಗೆಯಲು ಜೆಸಿಬಿ ಯಂತ್ರಗಳನ್ನು ಬಳಸಿಕೊಳ್ಳಲಾಗಿತ್ತು.

Advertisement

“ರಕ್ಷಣಾ ಕಾರ್ಯಾಚರಣೆ ವೇಳೆ ಸುರಕ್ಷತೆ ಮತ್ತು ದಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಪ್ರದೇಶಕ್ಕೆ ಸಾರ್ವಜನಿಕ ಪ್ರವೇಶವನ್ನು ನಿರ್ಬಂಧಿಸಲಾಗಿತ್ತು. ಮಗುವಿಗೆ ತತ್ ಕ್ಷಣದ ವೈದ್ಯಕೀಯ ನೆರವು ನೀಡಲು ಆಮ್ಲಜನಕ ಸೌಲಭ್ಯಗಳನ್ನು ಹೊಂದಿರುವ ವೈದ್ಯಕೀಯ ತಂಡಗಳು ಸ್ಥಳದಲ್ಲಿದ್ದವು.

Advertisement

Udayavani is now on Telegram. Click here to join our channel and stay updated with the latest news.

Next