Advertisement

ಕಳ್ಳಭಟ್ಟಿ ದುರಂತ: 30 ಸಾವು

12:30 AM Feb 23, 2019 | Team Udayavani |

ಗುವಾಹಟಿ: ಅಸ್ಸಾಂನ ಗೋಲಾಘಾಟ್‌ ಜಿಲ್ಲೆಯಲ್ಲಿ ಕಳ್ಳಭಟ್ಟಿ ಸೇವಿಸಿದ ಪರಿಣಾಮ 7 ಮಂದಿ ಮಹಿಳೆಯರು ಸೇರಿದಂತೆ ಕನಿಷ್ಠ 30 ಮಂದಿ ಮೃತಪಟ್ಟಿರುವ ಘಟನೆ ಶುಕ್ರವಾರ ನಡೆದಿದೆ. ಬಿಹಾರ ಮತ್ತು ಉತ್ತರಾಖಂಡದಲ್ಲಿ ಕಳ್ಳಭಟ್ಟಿ ದುರಂತವು ಹಲವರನ್ನು ಬಲಿತೆಗೆದುಕೊಂಡ ಬೆನ್ನಲ್ಲೇ ಅದೇ ಮಾದರಿಯ ಮತ್ತೂಂದು ಘಟನೆ ವರದಿಯಾಗಿದೆ. ಸಾಲಿಮಿರಾ ಟೀ ಎಸ್ಟೇಟ್‌ನಲ್ಲಿ ದುಡಿಯುತ್ತಿದ್ದ 100ಕ್ಕೂ ಹೆಚ್ಚು ಕಾರ್ಮಿಕರು ಕಳ್ಳಭಟ್ಟಿ ಸೇವಿಸಿದ್ದು, 30 ಮಂದಿ ಮೃತಪಟ್ಟಿದ್ದಾರೆ. 50ಕ್ಕೂ ಹೆಚ್ಚು ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪೈಕಿ ಬಹುತೇಕ ಮಂದಿಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ. ತನಿಖೆಗೆ ಸಿಎಂ ಸರ್ಬಾನಂದ ಸೊನೋವಾಲ್‌ ಆದೇಶಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next