ಚಾಮರಾಜನಗರ: ಶಾಲಾ ಕಾಲೇಜುಗಳ ಪಠ್ಯ ಪುಸ್ತಕಗಳಲ್ಲಿ ಶೇಕಡ 30ರಷ್ಟು ಕಡಿತ ಮಾಡಲಾಗುವುದು. ಈ ಬಗ್ಗೆ ಇಂದು ಸಂಜೆ ಶಿಕ್ಷಣ ಆಯುಕ್ತರಿಂದ ಬಗ್ಗೆ ಮಾಹಿತಿ ಬಿಡುಗಡೆ ಮಾಡಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದರು.
ಶಾಲಾ ಕಾಲೇಜುಗಳಿಗೆ ಭೇಟಿ ನೀಡಿದ ಬಳಿಕ ಚಾಮರಾಜನಗರದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಖಾಸಗಿ ಶಾಲೆಗಳ ಶುಲ್ಕದ ಬಗ್ಗೆ ಜನವರಿ 15 ರ ನಂತರ ತಜ್ಞರ ಅಭಿಪ್ರಾಯ ಪಡೆಯಲಾಗುವುದು. ತಜ್ಞರ ಮಾಹಿತಿ ಆಧರಿಸಿ ಶಾಲಾ ಕಾಲೇಜುಗಳ ಶುಲ್ಕ ನಿಗದಿಪಡಿಸಲಾಗುವುದು ಎಂದರು.
ಈಗಾಗಲೇ ಕೆಲವು ಖಾಸಗಿ ಸಂಸ್ಥೆಗಳು ಶೇಕಡ 30ರಷ್ಟು ಶುಲ್ಕ ಖಡಿತಗೊಳಿಸಲು ಮುಂದೆ ಬಂದಿವೆ. ಶುಲ್ಕ ಹೆಚ್ಚು ಕಡಿತಗೊಳಿಸಿದರೆ ಶಿಕ್ಷಕರು, ಉಪನ್ಯಾಸಕರ ವೇತನಕ್ಕೂ ತೊಂದರೆ ಆಗಲಿದೆ. ಇತ್ತ ಪೂರ್ತಿ ಶುಲ್ಕ ತುಂಬಲು ಪೋಷಕರಿಗೆ ಹೊರೆ ಆಗಲಿದೆ. ಶಿಕ್ಷಣ ಸಂಸ್ಥೆ ಮತ್ತು ಪೋಷಕರನ್ನು ಗಮನದಲ್ಲಿ ಇಟ್ಟು ಕೊಂಡು ಶುಲ್ಕ ನಿಗದಿ ಮಾಡಲಾಗುವುದ ಎಂದು ಸಚಿವರು ಹೇಳಿದರು.
ಇದನ್ನೂ ಓದಿ:ಡಿಜಿಟಲ್ ಕಲಿಕೆಗೆ ಉತ್ತೇಜನ, 150 ಕೋಟಿ ರೂ. ವೆಚ್ಚದಲ್ಲಿ ಟ್ಯಾಬ್ಲೆಟ್ ನೀಡಲು ಕ್ರಮ: ಸಿಎಂ
ಒಂದನೇ ತರಗತಿಯಿಂದ ಮಾಮೂಲಿ ತರಗತಿ ಆರಂಭಿಸುವ ಕುರಿತು ಜ. 15ರ ನಂತರ ತಜ್ಞರು ನೀಡುವ ವರದಿ ಬಳಿಕ ತೀರ್ಮಾನ ಮಾಡುತ್ತೇವೆ ಎಂದು ಸುರೇಶ್ ಕುಮಾರ್ ಹೇಳಿದರು.