ರಾಜಸ್ಥಾನ: 45 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ಸೊಂದು ದಟ್ಟ ಮಂಜಿನಿಂದ ರಸ್ತೆ ಕಾಣದೆ ಎದುರಿಗಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವತ್ತು ಮಂದಿ ಗಾಯಗೊಂಡಿದ್ದು ಹತ್ತು ಮಂದಿಯ ಸ್ಥಿತಿ ಗಂಭೀರವಾಗಿರುವ ಘಟನೆ ರಾಜಸ್ಥಾನದ ದೌಸಾ ಜಿಲ್ಲೆಯಲ್ಲಿ ಗುರುವಾರ(ಜ.2) ಬೆಳಿಗ್ಗೆ ಸಂಭವಿಸಿದೆ.
ಉಜ್ಜಯಿನಿಯಿಂದ ದೆಹಲಿಗೆ ತೆರಳುತ್ತಿದ್ದ ಸ್ಲೀಪರ್ ಬಸ್ ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಸಂಚರಿಸುವ ವೇಳೆ ಬೆಳ್ಳಂಬೆಳಗ್ಗೆ ದಟ್ಟ ಮಂಜು ಆವರಿಸಿರುವ ಕಾರಣ ಚಾಲಕನಿಗೆ ರಸ್ತೆ ಸರಿಯಾಗಿ ಗೋಚರಿಸದೆ ಅವಘಡ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಘಟನೆಯಿಂದಾಗಿ ಬಸ್ಸಿನ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದ್ದು ಚಾಲಕ ಸೇರಿ ಬಸ್ಸಿನಲ್ಲಿದ್ದ ಮೂವತ್ತು ಮಂದಿ ಗಾಯಗೊಂಡಿದ್ದು ಅದರಲ್ಲಿ ಹತ್ತು ಮಂದಿಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗಿದೆ ಗಂಭೀರ ಗಾಯಗೊಂಡವರನ್ನು ಜೈಪುರದಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳಲ್ಲಿ ಹೆಚ್ಚಿನವರು ದೆಹಲಿಯ ನಿವಾಸಿಗಳು ಎಂದು ಹೇಳಲಾಗಿದೆ.
ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: Court Verdict: ಹಿಂದೂ ಸಂತ ಚಿನ್ಮಯ್ ದಾಸ್ ಜಾಮೀನು ಅರ್ಜಿ ತಿರಸ್ಕರಿಸಿದ ಕೋರ್ಟ್