Advertisement
ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಸಾಂಪ್ರದಾಯಿಕವಾಗಿ ನಡೆಸಿಕೊಂಡು ಬರುತ್ತಿರುವ ನಾಡದೋಣಿ ಮೀನುಗಾರಿಕೆಗೆ ಹಂಚಿಕೆಯಾಗಿದ್ದ ಸೀಮೆ ಎಣ್ಣೆ ಸಕಾಲದಲ್ಲಿ ಸಿಗುತ್ತಿಲ್ಲ, ಈ ಕುರಿತು ಕೇಂದ್ರ ಸರಕಾರದ ಗಮನವನ್ನು ಸೆಳೆದು ಹಂಚಿಕೆಯಾಗಿರುವ ಸೀಮೆ ಎಣ್ಣೆಯನ್ನು ತ್ವರಿತವಾಗಿ ಬಿಡುಗಡೆಗೊಳಿಸಬೇಕು. ಈ ಮೂಲಕ ಕರಾವಳಿಯ ಮೀನುಗಾರರ ಹಿತವನ್ನು ಕಾಯಬೇಕು ಎಂದು ಉಡುಪಿಯ ಮೀನುಗಾರರ ನಿಯೋಗ ಸಚಿವರಿಗೆ ಮನವಿ ಸಲ್ಲಿಸಿತ್ತು. ಈ ಮನವಿಯನ್ನು ಕೇಂದ್ರ ಪೆಟ್ರೋಲಿಯಂ ಖಾತೆ ಸಚಿವರ ಗಮನಕ್ಕೆ ತಂದು ಅತೀ ಶೀಘ್ರದಲ್ಲಿ ಹೆಚ್ಚುವರಿ ಸೀಮೆ ಎಣ್ಣೆಯನ್ನು ಕರ್ನಾಟಕ ರಾಜ್ಯಕ್ಕೆ ಬಿಡುಗಡೆಗೊಳಿಸಿ ಕರಾವಳಿ ಮೀನುಗಾರರ ಹಿತ ಕಾಯುವಂತೆ ಕೇಳಿಕೊಂಡಿದ್ದರು. ಮನವಿಯನ್ನು ಪುರಸ್ಕರಿಸಿದ ಕೇಂದ್ರ ಪೆಟ್ರೋಲಿಯಂ ಸಚಿವಾಲಯ ಬುಧವಾರ ರಾಜ್ಯ ಸರಕಾರಕ್ಕೆ 2022-23ನೇ ಸಾಲಿನ 3000ಕೆಎಲ್(30 ಲಕ್ಷ ಲೀ.) ಹೆಚ್ಚುವರಿ ಸೀಮೆ ಎಣ್ಣೆಯನ್ನು ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ.
Advertisement
ಕೇಂದ್ರದಿಂದ ರಾಜ್ಯಕ್ಕೆ ಹೆಚ್ಚುವರಿ 30 ಲಕ್ಷ ಲೀಟರ್ ಸೀಮೆ ಎಣ್ಣೆ ಬಿಡುಗಡೆ
09:10 AM Nov 03, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.