Advertisement

ಗುಂಪಿನಲ್ಲಿ ಅಲ್ಲ, ಒಬ್ಬೊಬ್ಬರಾಗಿ ಬನ್ನಿ: ಶಾಸಕರಿಗೆ ಅರುಣ್ ಸಿಂಗ್ ತಾಕೀತು

08:12 AM Jun 17, 2021 | Team Udayavani |

ಬೆಂಗಳೂರು: ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್‌ ಸಿಂಗ್‌ ಅವರು ಗುರುವಾರ ಶಾಸಕರನ್ನು ಪ್ರತ್ಯೇಕವಾಗಿ ಭೇಟಿ ಮಾಡಿ ಆಹವಾಲು ಸ್ವೀಕರಿಸಲಿದ್ದಾರೆ. ಬೆಳಗ್ಗೆ 9.30ರಿಂದಲೇ ದಿನವಿಡೀ ಹಲವು ಶಾಸಕರು ಅರುಣ್‌ ಸಿಂಗ್‌ ಅವರ ಭೇಟಿಗೆ ಸಮಯವನ್ನು ನಿಗದಿಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

Advertisement

ಈ ಪೈಕಿ ಮುಖ್ಯಮಂತ್ರಿಗಳ ವಿರುದ್ಧ ಬಹಿರಂಗ ಹೇಳಿಕೆ ನೀಡಿದ್ದ ಸಿ.ಪಿ.ಯೋಗೇಶ್ವರ್‌, ಬಸನಗೌಡ ಪಾಟೀಲ್‌ ಯತ್ನಾಳ್‌ ಹಾಗೂ ಮುಖ್ಯ ಸಚೇತಕ ಸುನೀಲ್‌ ಕುಮಾರ್‌ ಸೇರಿದಂತೆ ಸುಮಾರು 30ಕ್ಕೂ ಹೆಚ್ಚು ಶಾಸಕರು ಅರುಣ್‌ ಸಿಂಗ್‌ ಭೇಟಿಗೆ ಅವಕಾಶ ಕೋರಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ:ಅರುಣ್‌ ಸಿಂಗ್‌ ರಾಜ್ಯ ಪ್ರವಾಸ : ಸಂಪುಟಕ್ಕೆ ಪುನಾರಚನೆ ಸರ್ಜರಿ?

ಯಾವುದೇ ಶಾಸಕರು ಗುಂಪು ಕಟ್ಟಿಕೊಂಡು ಅಭಿಪ್ರಾಯ ಹೇಳಲು ಅವಕಾಶವಿಲ್ಲ, ಒಬ್ಬೊಬ್ಬರಾಗಿ ಬಂದು ತಮ್ಮ ಸಮಸ್ಯೆ ಹೇಳಿಕೊಳ್ಳಬಹುದು ಎಂದು ಅರುಣ್‌ ಸಿಂಗ್‌ ತಾಕೀತು ಮಾಡಿದ್ದಾರೆ ಎನ್ನಲಾಗಿದೆ. ಇದೇ ಕಾರಣಕ್ಕೆ ಶಾಸಕರು ಪ್ರತ್ಯೇಕವಾಗಿ ಭೇಟಿ ಮಾಡಿ ತಮ್ಮ ಸಮಸ್ಯೆ ಹೇಳಿಕೊಳ್ಳಲು ಮುಂದಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ನಾಯಕತ್ವ ಬದಲಾವಣೆ ಚರ್ಚೆ ಇಲ್ಲ: ರಾಜ್ಯ ಉಸ್ತುವಾರಿ ಭೇಟಿ ಸಂದ ರ್ಭದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಯೇ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಸೇರಿದಂತೆ ಹಿರಿಯ ಸಚಿವರು ಅಭಿಪ್ರಾಯಪಟ್ಟಿದ್ದಾರೆ. ಇದರ ಮಧ್ಯೆಯೇ ಬುಧವಾರ ಬೆಳಿಗ್ಗೆಯೇ ಸಿಎಂ ಆಪ್ತ ಸಚಿವರು ಮತ್ತು ಶಾಸಕರು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಪ್ರಸಕ್ತ ವಿದ್ಯಮಾನಗಳ ಕುರಿತು ಚರ್ಚೆ ನಡೆಸಿದರು.

Advertisement

ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಸಚಿವರಾದ ಸಿ.ಸಿ. ಪಾಟೀಲ್, ಪ್ರಭು ಚೌವ್ಹಾಣ್‌, ಶಾಸಕರಾದ ಮಹೇಶ ಕುಮಠಳ್ಳಿ, ರವಿ ಸುಬ್ರಮಣ್ಯ, ರಾಜುಗೌಡ ಹಾಜರಿದ್ದರು. ಈ ಸಂದರ್ಭದಲ್ಲಿ ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌ ಅವರ ಎದುರು ಸಿಎಂ ಆಪ್ತ ಶಾಸಕರು ಯಡಿಯೂರಪ್ಪ ಅವರ ಪರವಾಗಿ ಅಭಿಪ್ರಾಯ ವ್ಯಕ್ತಪಡಿಸುವ ಬಗ್ಗೆ ಚರ್ಚಿಸಲಾಗಿದೆ ಎಂದು ಮೂಲಗಳು ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next